ತುಮಕೂರು: ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ ಆಗ್ತಾ ಇದೆ. ದಲಿತರಲ್ಲಿ ಹೋಮ – ಹವನ ಮಾಡಿಸುವುದು ಹೆಚ್ಚಾಗಿದೆ. ದೈವಭಕ್ತಿಯು ಜಾಸ್ತಿಯಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿ ತಪ್ಪು ಎಂದು ಹೇಳುವುದಿಲ್ಲ. ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕಿದೆ. ಇತ್ತೀಚಿನ ದಿನಗಳಲ್ಲಿ ಪೂಜೆ – ಹೋಮ ಮಾಡಿಸುವವರು ನಾವೇ. ಹವನ ಮಾಡಿಸುವವರು ನಾವೇ ಎಂದಿದ್ದಾರೆ.
ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಈ ಬಗ್ಗೆ ಮಾತನ್ನಾಡಿದ್ದಾರೆ. ಹವನ ಮಾಡಿಸುವುದು ನಾವೇ, ಕಾಣಿಕೆ ಕೊಡುವುದು ನಾವೇ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು. ವಾಸ್ತವಿಕತೆಯಿಂದ ದೂರ ಹೋಗಬಾರದು. ವಾಸ್ತವಿಕತೆಯ ಸತ್ಯ ಸಂಗತಿಗಳನ್ನು ನಿರ್ಭೀತಿಯಿಂದ ಹೇಳಿ ಜನರಲ್ಲಿ ಅರಿವು ಮೂಡಿಸಬೇಕು. ಸತ್ಯ ಹೇಳುವುದನ್ನು ಎಲ್ಲಾ ಯುವಕರು ಕಲಿಯಬೇಕು.
ಇತಿಹಾಸ ಅರಿಯದೆ ಇತಿಹಾಸ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ನಮಗೆ ನಾವೇ ಕೆಳವರ್ಗ ಅಂತ ಯಾಕೆ ಹೇಳಿಕೊಳ್ಳಬೇಕು. ಮತ್ತು ಮೇಲ್ವರ್ಗ ಅಂತ ಹೇಳಿಕೊಳ್ಳುವುದರ ಬದಲು ಹಿಂದುಳಿದವರು ಮತ್ತು ಮುಂದುವರೆದವರು ಅಂತ ಹೇಳಿಕೊಳ್ಳಲಿ. ಯಾರೆಲ್ಲ ಬಡವರು ಇರುತ್ತಾರೆ, ಅಸಹಾಯಕರು ಇರುತ್ತಾರೆ, ದನಿ ಇಲ್ಲದವರು ಇರುತ್ತಾರೆ, ಶೋಷಿತ ಸಮುದಾಯ ಇರುತ್ತದೆ, ಅವರು ಯಾವತ್ತೂ ಕೂಡ ಇನ್ನೊಬ್ಬರಿಗೆ ಮೋಸ ಮಾಡುವಂತಹ, ಅನ್ಯಾಯ ಮಾಡುವಂತಹ, ಸುಳ್ಳು ಹೇಳುವಂತಹ ಕೆಲಸವನ್ನು ಮಾಡುವುದಿಲ್ಲ. ನಾವೂ ಬೇರೆಯವರಿಗಿಂತ ಬುದ್ಧಿವಂತರಿದ್ದೇವೆ. ಹಾಗಾಗಿ ನಾವ್ಯಾಕೆ ಕೆಳವರ್ಗದವರು ಅಂತ ಹೇಳಿಕೊಳ್ಳಬೇಕು. ಇದು ಸರಿಯಾದ ಚಿಂತನೆಯಲ್ಲ. ಕೆಳವರ್ಗ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂಬ ಮಾತನ್ನ ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











