Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯ ಬಹುತೇಕ ಕ್ಷೇತ್ರಗಳಿಗೆ ಈಗಲೇ ಟಿಕೆಟ್ ಘೋಷಿಸಿದ ಬಿಎಸ್ವೈ: ಅಸಮಾಧಾನ ಸ್ಪೋಟ

---Advertisement---

ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಬಹಳ ಸಮಯವಿದೆ. ಆದರೆ ಈಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಒಂದಷ್ಟು ಅಭ್ಯರ್ಥಿಗಳಿಗೆ ಈಗಲೇ ಟಿಕೆಟ್ ಅನ್ನು ಘೋಷಣೆ ಮಾಡಿದ್ದಾರೆ. ಇದು ಬೇರೆಯವರ ಅಸಮಾಧಾನಕ್ಕೆ ಕಾರಣವಾಗಿದೆ. ಗೊಂದಲವನ್ನ ಹೋಗಲಾಡಿಸಬೇಕಾದ ಹಿರಿಯರೇ ಗೊಂದಲ ಸೃಷ್ಟಿಸಿರುವುದು ಮಾತ್ರ ವಿಪರ್ಯಾಸವೇ ಸರಿ.

ಫೆಬ್ರವರಿ 28ರಂದು ರೇಣುಕಾಚಾರ್ಯ ಅವರ ಹುಟ್ಟುಹಬ್ಬದ ಹಿನ್ನಲೆ ಹೊನ್ನಾಳಿಯಲ್ಲಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯಡಿಯೂರಪ್ಪ ಅವರು ಟಿಕೆಟ್ ಘೋಷಣೆ ಮಾಡಿದ್ದಾರೆ. ದಾವಣಗೆರೆಯ ಬಹುತೇಕ ಕ್ಷೇತ್ರಗಳಿಗೆ ತಮ್ಮ ಆಪ್ತರಿಗೆ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ. ಹೊನ್ನಾಳಿಗೆ ಎಂಪಿ ರೇಣುಕಾಚಾರ್ಯ, ಚನ್ನಗಿರಿ- ಮಾಡಾಳ್ ವಿರೂಪಾಕ್ಷಪ್ಪ , ಹರಿಹರ-ಚಂದ್ರಶೇಖರ ಪೂಜಾರ, ದಾವಣಗೆರೆ ಉತ್ತರ ಲೋಕಕೆರೆ ನಾಗರಾಜ್, ಜಗಳೂರು ಎಸ್ ವಿ ರಾಮಚಂದ್ರ ಹಾಗೂ ಹರಪನಹಳ್ಳಿ-ಕರುಣಾಕರ ರೆಡ್ಡಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಈ ಘೋಷಣೆಯಿಂದ ಪಕ್ಷೀಯ ಮುಖಂಡರು ತಿರುಗಿ ಬಿದ್ದಿದ್ದಾರೆ. ದಾವಣಗೆರೆಯಲ್ಲಿ ಘೋಷಣೆ ಮಾಡಿದ ಘೋಷಣೆಯನ್ನ ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲಿ ಮೊದಲೇ ಬಿಜೆಪಿಯ ಪಾಡು ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೇ ಆ ರೀತಿ ಆಗಿತ್ತು. ಹೀಗಾಗಿಯೇ ಗೊಂದಲ, ಅಸಮಾಧಾನವನ್ನ ಸರಿ ಮಾಡುವುದಕ್ಕೆಂದೆ ಜಗದೀಶ್ ಶೆಟ್ಟರ್ ಅವರಿಗೆ ಸೂಚನೆ ನೀಡಲಾಗಿತ್ತು. ರೇಣುಕಾಚಾರ್ಯ ಹಾಗೂ ಜಿಎಂ ಸಿದ್ದೇಶ್ವರ ಅವರ ನಡುವೆ ಇರುವ ಮನಸ್ತಾಪ ದೂರ ಮಾಡಿ, ಎರಡು ಬಣಗಳನ್ನು ಒಂದು ಮಾಡುವಂತೆ ತಿಳಿಸಿದ್ದರು. ಇದೀಗ ಬಿಎಸ್ವೈ ಹೇಳಿಕೆ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...