Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ ಕೇತಗ್ರಸ್ಥ ರಕ್ತ ಚಂದ್ರಗ್ರಹಣ.

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು.

ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು…

ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ..

ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು…ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು.

ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now