ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 03: ನಗರದ ಹೊರಹೊಲಯದ ಹಿರಿಯೂರು ರಸ್ತೆಯ ನಿಸರ್ಗ ಡಾಬಾದ ಬೇಲಿಗೆ ಆಕಸ್ಮಿಕ ಬೆಂಕಿ ಬಿದ್ದು ನಿಸರ್ಗ ಡಾಬಾದ 8 ತೆಂಗಿನ ಗರಿಗಳಿಂದ ನಿರ್ಮಾಣ ಮಾಡಲಾಗಿದ್ದ ಶೆಡ್ಗಳು ಸುಟ್ಟಿದ್ದು ಶೆಡ್ಡಿನಲ್ಲಿದ್ದಂತಹ ಕುರ್ಚಿ ಹಾಗೂ ಇನ್ನಿತರ ಪರಿಕರಗಳು ಸುಟ್ಟು ಸುಮಾರು ಒಂದುವರೆ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.
ಡಾಬಡಾ ಹಿಂಭಾಗದಲ್ಲಿ ಯಾರೋ ಕಿಡಿಗೇರಿಗಳು ಬೆಂಕಿ ಹಚ್ಚಿದ್ದು ಡಾಬದ ಸುತ್ತಲೂ ಇದ್ದ ಬೇಲಿ ಸುಟ್ಟು ನಂತರ ಡಾಬದ ಒಳಗೆ ಇದ್ದಂತಹ ಸೆಡ್ ಗಳು ಸಹ ಬೆಂಕಿಗಾಹುತಿಯಾಗಿವೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಂಕಿ ಹೊತ್ತಿಕೊಂಡು ಈ ಸಂದರ್ಭದಲ್ಲಿ ಡಾಬದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಪ್ರಮಾಣದ ಹೊಗೆ ತುಂಬಿಕೊಂಡಿತ್ತು..
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













