Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈನ ಸನ್ಯಾಸ ಧೀಕ್ಷೆ ಪಡೆದ ದಾವಣಗೆರೆಯ ನಾಲ್ಕು ಜ‌ನ: ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ

---Advertisement---

ಲೌಕಿಕ ಸುಖ-ಸಂತೋಷ, ಆಸ್ತಿ-ಐಶ್ವರ್ಯ, ಕುಟುಂಬ ಬಂಧಗಳನ್ನು ತ್ಯಜಿಸಿ ಉದ್ಯಮಿ ದಂಪತಿ ಹಾಗೂ ಇಬ್ಬರು ಯುವತಿಯರು ಕಠಿಣ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.ಈಗ ದಂಪತಿ ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಆಚಾರ್ಯ ಶ್ರೀ ಅಭಯ್ ಶೇಖರ್ ಸುರೀಶ್ವರ ಜೀ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದುಕೊಂಡಿರುವ ಕ್ರುನಾಲ್ ಬೇನ್ (30), ದಾವಣಗೆರೆಯ ಬಿ.ಕಾಂ ಪದವೀಧರೆ ದೀಕ್ಷಿತಾ ಬೇನ್ (28) ಸನ್ಯಾಸತ್ವದ ದೀಕ್ಷೆ ಪಡೆದುಕೊಂಡಿದ್ದಾರೆ.ದಾವಣಗೆರೆಯ ಲಲಿತ್ ಗಾರ್ಮೆಂಟ್ಸ್‌ನ ಮಾಲೀಕರಾದ ಭರತ್ ಜೈನ್ (52), ಪತ್ನಿ ಆರತಿ ಬೇನ್ (50) ಕೂಡ ಸನ್ಯಾಸತ್ವದ ದೀಕ್ಷೆ ಸ್ವೀಕರಿಸಿದ್ದಾರೆ.

ಸನ್ಯಾಸ ಸ್ವೀಕರಿಸುವುದು ಸುಲಭವಲ್ಲ.ಬರಿಗಾಲಿನಲ್ಲಿ ನಡೆಯಬೇಕು. ಅತಿಸೂಕ್ಷ್ಮ ಜೀವಿಗಳಿಗೆ ಹಾನಿಯಾಗದಂತೆ ನಡೆದುಕೊಳ್ಳಬೇಕು.. ಮೊಬೈಲ್, ವಾಹನ, ವಿದ್ಯುತ್ ಸೇರಿದಂತೆ ಯಾವುದೇ ಭೌತಿಕ ಸೌಲಭ್ಯಗಳನ್ನು ಬಳಸುವುದಿಲ್ಲ. ಆಹಾರವನ್ನು ಕೂಡ ನಿಯಮಿತ ವಿಧಿಗಳಂತೆ ಸ್ವೀಕರಿಸಬೇಕು.ದಾವಣಗೆರೆಯಲ್ಲಿ ನಡೆದ ಈ ದೀಕ್ಷಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...