Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಿಕೆ: ಎದುರಾಯಿತೇ ದೊಡ್ಡ ಸಮಸ್ಯೆ ?

---Advertisement---

ಯಶ್‌ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.ಕೆಲವೇ ದಿನಗಳಲ್ಲಿ ನಟ ಯಶ್‌ ಅವರನ್ನು ರಾಯ, ಟಿಕೆಟ್‌ ಪಾತ್ರದಲ್ಲಿ ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳಿ ಇನ್ನಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ.ಈ ಕುರಿತು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಶ್ರಮದ ಬಳಿಕ ಮಾರ್ಚ್ 19ರಂದು ನಮ್ಮ ಸಿನಿಮಾವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವು. ಆದರೆ ಕಾರಣಾಂತರಗಳಿಂದ ನಿಮ್ಮನ್ನು ಆ ದಿನ ತಲುಪಲು ಸಾಧ್ಯವಾಗುತ್ತಿಲ್ಲ.
ನಮ್ಮ ಸಿನಿಮಾ ಜೂನ್ 4ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

ಇರಾನ್-ಅಮೆರಿಕ, ಇಸ್ರೇಲ್ ಯುದ್ದದ ಭೀಕರತೆ ಎದುರಾಗಿದೆ. ಸಿನಿಮಾವನ್ನು ಏಕಕಾಲಕ್ಕೆ ಜಾಗತಿಕವಾಗಿ ಬಿಡುಗಡೆ ಮಾಡಲು ಯೋಜನೆ ಹೊಂದಿದ್ದ ಚಿತ್ರತಂಡಕ್ಕೆ ಯುದ್ಧದದಿಂದ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.ಹಾಗಾಗಿ ಮಾರ್ಚ್ 19ರಂದು ನಿಮ್ಮನ್ನು ತಲುಪಲು ಸಾಧ್ಯವಾಗುತ್ತಿಲ್ಲ. ನಮ್ಮ ಸಿನಿಮಾ ಜೂನ್ 4, 2026ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಎಂದು ಟಾಕ್ಸಿಕ್ ಸಿನಿಮಾದ ನಿರ್ದೇಶಕಿ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now