Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ..!

---Advertisement---

ದಾವಣಗೆರೆ: ಕಳೆದ‌ ಕೆಲವು ದಿನಗಳ ಹಿಂದಷ್ಟೇ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದರು. ಆದರೆ ಈಗ ನೋಡಿದ್ರೆ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಹಾಕುವ ಬೆದರಿಕೆಯನ್ನು ಹಾಕಿದ್ದಾರೆ. ಇದು ದಾವಣಗೆರೆ ಮಂದಿಯ ಆತಂಕಕ್ಕೆ ಕಾರಣವಾಗಿತ್ತು. ನಿಜಲಿಂಗಪ್ಪ ಬಡಾವಣೆಯಲ್ಲಿ ಜಿಲ್ಲಾಧಿಕಾರಿ ಅವರ ಮನೆ ಇದೆ.

112ಗೆ ಕಾಲ್ ಮಾಡಿದ್ದ ಕಿಡಿಗೇಡಿ, ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸವನ್ನು ಸ್ಪೋಟ ಮಾಡುವುದಾಗಿ ಹೇಳಿದ್ದಾನೆ. ಈ ಕರೆ ಬಂದ ತಕ್ಷಣ ಬಡಾವಣೆ ಠಾಣೆ ಪೊಲೀಸರು ಅಲರ್ಟ್ ಆಗಿದ್ದಾರೆ. ಮೊದಲು ಜಿಲ್ಲಾಧಿಕಾರಿ ಮನೆ ಇರುವ ನಿಜಲಿಂಗಪ್ಪ ನಿವಾಸಕ್ಕೆ ದೌಡಾಯಿಸಿದ್ದಾರೆ. ಜೊತೆಗೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದರು. ಬಡಾವಣೆ ಠಾಣೆಯ ಪಿಐ ಗಾಯಿತ್ರಿ ಅವರು ಸಿಬ್ಬಂದಿಯೊಂದಿಗೆ ಜಿಲ್ಲಾಧಿಕಾರಿ ಮನೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಡಿಸಿ ನಿವಾಸದ ಪ್ರತಿಯೊಂದು ಮೂಲೆ ಮೂಲೆ ಪರಿಶೀಲನೆ ನಡೆಸಿದರು ಯಾವುದೇ ಸ್ಟೋಟಕ ಸಿಗದ ಹಿನ್ನಲೆ ವಾಪಸ್‌ ತೆರಳಿದರು. ಅದರಲ್ಲೂ ಕರೆ ಮಾಡಿದ 45 ನಿಮಿಷದಲ್ಲಿ ಮನೆಯನ್ನು ಸ್ಪೋಟ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಇದರಿಂದಾಗಿ ಪೊಲೀಸರು ಕೂಡ ಸ್ವಲ್ಪ ಗಾಬರಿಯಾಗಿದ್ದರು. ಹೀಗಾಗಿಯೇ ಓಡೋಡಿ ಬಂದರು. ಬೇಗ ಬೇಗ ಪರಿಶೀಲನೆ ಮಾಡುವ ಪ್ರಯತ್ನ ಮಾಡಿದರು. ಏನು ಸಿಗದೆ ಇದ್ದಾಗ, ಸಮಾಧಾನದಿಂದ ಅಲ್ಲಿಂದ ಹೋಗಿದ್ದಾರೆ. ಕಳೆದ ತಿಂಗಳು ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಹಾಕುವುದಾಗಿ ಯಾರೋ ಹೇಳಿದ್ದರು. ಈ ತಿಂಗಳಲ್ಲೂ ಆ ರೀತಿಯ ಬೆದರಿಕೆ ಕರೆಗಳು ಬಂದಿವೆ. ಹೀಗಾಗಿ ಪೊಲೀಸರು ಗಂಭೀರವಾಗಿ ಈ ಪ್ರಕರಣವನ್ನು ತೆಗೆದುಕೊಂಡಿದ್ದು, ಆತನ ಹುಡುಕಾಟದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...