Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುದ್ಧದ ಪರಿಣಾಮದಿಂದ ಪೆಟ್ರೋಲ್ ಡಿಸೇಲ್ ಖಾಲಿ ಅಥವಾ ದರ ಹೆಚ್ಚಳವಾಗುತ್ತದೆಯೇ? ಕೇಂದ್ರ ಸರ್ಕಾರ ಹೇಳಿದ್ದೇನು ?

---Advertisement---

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು ದಿನದಿಂದ ದಿನಕ್ಕೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ‌‌. ಈ ನಡುವೆ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ಸಂಗ್ರಹ ಹಾಗೂ ಮಿತಿಯ ಬಗ್ಗೆ ಭಾರತೀಯರಲ್ಲಿ ಆತಂಕ ಹೆಚ್ಚಾಗುತ್ತಿದೆ.ಭಾರತದಲ್ಲಿ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖಾಲಿ ಆಗುವ ಆತಂಕ ಶುರುವಾಗಿದೆ.

ಇದೀಗ ಕೇಂದ್ರಸರ್ಕಾರ ಈ ಕುರಿತು ನಿಖರವಾದ ಮಾಹಿತಿ ನೀಡಿದೆ.ಈಗ ಭಾರತದ ಬಳಿ ಎಷ್ಟು ದಿನಗಳಿಗೆ ಆಗುವ ಕಚ್ಚಾ ತೈಲವಿದೆ? ಭಾರತದ ವಿವಿಧ ನಗರಗಳಲ್ಲಿ ಜನ ಪೆಟ್ರೋಲ್ ಬಂಕ್‌ಗಳ ಮುಂದೆ ನಿಲ್ಲುವ ಸಂಖ್ಯೆ ಹೆಚ್ಚಾಗಿದೆ. ಆದರೆ ಸದ್ಯಕ್ಕೆ ಆತಂಕ ಪಡುವ ಅವಶ್ಯಕತೆ ಇಲ್ಲ. ಮುಂದಿನ 25 ದಿನಗಳಿಗೆ ಅವಶ್ಯವಿರುವ ಕಚ್ಚಾ ತೈಲ (ಪೆಟ್ರೋಲ್ – ಡೀಸೆಲ್) ಭಾರತದ ಬಳಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದಾಗ್ಯೂ ಸದ್ಯಕ್ಕೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಲಾಗಿದೆ.
ಆದರೆ ಕೇಂದ್ರ ಸರ್ಕಾರ, ಅಂತರರಾಷ್ಟ್ರೀಯ ತೈಲ ಬೆಲೆಗಳು ಸುಮಾರು ಶೇ 9ದಷ್ಟು ಏರಿಕೆಯಾಗಿವೆ..

ಭಾರತದಲ್ಲಿ ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆಯಿಲ್ಲ ಎಂದು ಕೇದ್ರ ಹೇಳಿದೆ‌.ತುರ್ತು ಸಂದರ್ಭ ಎದುರಾದರೆ ಭಾರತಕ್ಕೆ ಕಚ್ಚಾ ತೈಲವನ್ನು ಸರಬರಾಜು ಮಾಡುವುದಕ್ಕೆ ನಾವು ಸಿದ್ಧರಿದ್ದೇವೆ ಎಂದು ರಷ್ಯಾ ಈಗಾಗಲೇ ಹೇಳಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...