Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2023 ರ ಈ ಒಂದು ದಿನದ ಮೋದಿ ಕಾರ್ಯಕ್ರಮಕ್ಕೆ ಆಗಿನ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದು ಎಷ್ಟು ಕೋಟಿ ಗೊತ್ತೆ?

---Advertisement---

2023ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಒಂದು ದಿನದ ಎರಡು ಕಾರ್ಯಕ್ರಮಗಳಿಗೆ ಅಂದಿನ ಬಿಜೆಪಿ ಸರ್ಕಾರ ₹33 ಕೋಟಿ ಖರ್ಚು ಮಾಡಿತ್ತು. ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲೆಂದೇ ₹6.5 ಕೋಟಿ ಖರ್ಚು ಮಾಡಲಾಗಿದೆ ಎಂದು ಈಗ ಮಾಹಿತಿ ಒದಗಿಬಂದಿದೆ.

2023ರ ಫೆಬ್ರುವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ ನೆರವೇರಿತ್ತು. ಇದಕ್ಕೆ ₹18.81 ಕೋಟಿ ಖರ್ಚು ಮಾಡಲಾಗಿತ್ತು.ಈ ಕಾರ್ಯಕ್ರಮಕ್ಕೆ ವಿವಿಧ ಕಡೆಗಳಿಂದ ಜನರನ್ನು ಕರೆ ತರಲು 1,800 ಬಸ್‌ಗಳನ್ನು ಬಳಸಿಕೊಳ್ಳಲಾಗಿತ್ತು. ಇದಕ್ಕಾಗಿ ₹4.11 ಕೋಟಿ ವೆಚ್ಚ ಮಾಡಲಾಗಿತ್ತು. ಪ್ರಧಾನಿ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಯವರ ಭಾಷಣದ ವೇದಿಕೆಗೆ ಮಳೆ ನಿರೋಧಕ ಜರ್ಮನ್‌ ಮಾದರಿಯ ಪೆಂಡಾಲ್‌ ಹಾಕಲು, ಗ್ರೀನ್ ರೂಂ, ಸ್ಟಾಲ್‌ಗಳು ಮತ್ತು ಹೂವಿನ ಅಲಂಕಾರಕ್ಕಾಗಿ ₹1.8 ಕೋಟಿ ವೆಚ್ಚ ಮಾಡಲಾಗಿತ್ತು. ಇವೆಲ್ಲದಕ್ಕೂ ವೆಚ್ಚ ಮಾಡಲು, ಲೋಕೋಪಯೋಗಿ ಇಲಾಖೆ ಕೆಟಿಪಿಪಿ ಕಾಯ್ದೆಯ ಸೆಕ್ಷನ್‌ 4(ಜಿ) ಅಡಿ ವಿನಾಯ್ತಿ ಪಡೆದಿತ್ತು.

ಈ ಕಾರ್ಯಕ್ರಮದ ನಂತರ ಬೆಳಗಾವಿಯಲ್ಲಿ ನಡೆದ ಮತ್ತೊಂದು ಕಾರ್ಯಕ್ರಮಕ್ಕೆ ₹14.35 ಕೋಟಿ ವೆಚ್ಚ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರಲೆಂದೇ ₹2.5 ಕೋಟಿ ವೆಚ್ಚ ಮಾಡಲಾಗಿತ್ತು.

‘ಲಂಚಮುಕ್ತ ಕರ್ನಾಟಕ’ ಸಂಘಟನೆಯ ಮಂಜುನಾಥ ಹಿರೇಚೌಟಿ ಅವರು ಮಾಹಿತಿ ಹಕ್ಕು ಅಡಿ ಪಡೆದ ದಾಖಲೆಗಳಲ್ಲಿ ಈ ಮಾಹಿತಿ ಇದೆ.
ಮಂಜುನಾಥ ಅವರು ಈ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಲು 2023ರ ಮಾರ್ಚ್‌ನಲ್ಲಿ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. 2026ರ ಜನವರಿಯಲ್ಲಿ ಮಾಹಿತಿ ಪಡೆಯಲು ಯಶಸ್ವಿಯಾದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now