Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ: ಕಾರಣವೇನು ಗೊತ್ತೆ ?

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.05 : ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ವಿರುದ್ದ ಗುರುವಾರ ಮಾದಿಗರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರುಗಳ ವಿರುದ್ದ ಧಿಕ್ಕಾರಗಳನ್ನು ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ನಾಯಕರುಗಳ ಫೋಟೋಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

 

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಗಟ್ಟಿ ಒಳ ನುಸುಳುವುದನ್ನು ತಡೆದರು.

 

ಒಳ ಮೀಸಲಾತಿಗಾಗಿ ಕಳೆದ 35 ವರ್ಷಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಮಹತ್ತರ ತೀರ್ಪು ನೀಡಿದ್ದರು ರಾಜ್ಯ ಸರ್ಕಾರ ಇನ್ನು ಜಾರಿಗೊಳಿಸದೆ ಮಾದಿಗರನ್ನು ಯಾಮಾರಿಸಿಕೊಂಡು ಬರುತ್ತಿದೆ. ಹೆಚ್ಚು ಮೀಸಲಾತಿ ಸೌಲಭ್ಯಗಳನ್ನು ಪಡೆದಿರುವ ಪರಿಶಿಷ್ಟ ಜಾತಿ ಸಮುದಾಯಗಳು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯಗಳಿಗೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.

 

ಎ.ಜೆ.ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿಯ ಶಿಫಾರಸ್ಸು ಹಾಗೂ ನಾಗಮೋಹನ್‍ದಾಸ್ ಆಯೋಗದ ವರದಿಗಳನ್ನು ಕೆಲ ಸಮುದಾಯಗಳು ಒಪ್ಪುತ್ತಿಲ್ಲದ ಕಾರಣ ಒಳ ಮೀಸಲಾತಿ ಜಾರಿಗೆ ಅಡ್ಡಿಯಾಗುತ್ತಿದೆ. ವಿಶ್ವವಿದ್ಯಾನಿಲಯಗಳಲ್ಲಿ ವಿಷಯವಾರು ನೇಮಕಾತಿ ಕೈಬಿಟ್ಟು ವಿಶ್ವವಿದ್ಯಾನಿಲಯಗಳನ್ನೇ ಒಂದು ಘಟಕವಾಗಿಸಿ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಇವರುಗಳ ಪ್ರತಿಭಟನಾಕಾರರು ಹರಿಹಾಯ್ದರು.

ನೇತ್ರಾನಂದ ಕೆ.ಎಸ್. ಕಿರಣ್‍ಕುಮಾರ್, ಜಗದೀಶ್, ಮಾರುತಿ, ಹುಲ್ಲೂರು ಕುಮಾರ್, ಕೋಟಿ ಅಳಗವಾಡಿ, ಕೆ.ಟಿ.ಶಿವಕುಮಾರ್, ಬ್ಯಾಲಾಳ್ ಜಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಮೂರ್ತಿ, ಪ್ರಸನ್ನ, ಕೆಂಚಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...