Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ : ಸಿದ್ದರಾಮಯ್ಯ ಘೋಷಣೆ

---Advertisement---

ಬೆಂಗಳೂರು: 2026-27ನೇ ಸಾಲಿನ ಬಜೆಟ್ ಅನ್ನು ಸಿದ್ದರಾಮಯ್ಯ ಅವರು ಮಂಡನೆ ಮಾಡ್ತಾ ಇದ್ದು, ಆ ಬಜೆಟ್ ನಲ್ಲಿ ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿದ್ದಾರೆ. 16 ವರ್ಷದ ಒಳಗಿನ ಮಕ್ಕಳು ಮೊಬೈಲ್ ಬಳಕೆ ಮಾಡುವುದನ್ನು ನಿಷೇಧದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಮೊಬೈಲ್ ಬಳಕೆಯಿಂದ ಮಕ್ಕಳ ಆರೋಗ್ಯದ ಮೇಲೂ ಅಡ್ಡ ಪರಿಣಾಮ ಬೀರಲಿದೆ. ಹೀಗಾಗಿ ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿದ್ದಾರೆ.

ಮಕ್ಕಳ ಮೇಲೆ ಮೊಬೈಲ್ ಅಡ್ಡ ಪರಿಣಾಮ ಬೀರುತ್ತಿದ್ದು, ಅದನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ. ಇದು ಮಕ್ಕಳ ಆರೋಗ್ಯ, ವಿಧ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನ ಆಗಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಈಗಂತು ಈ ಮೊಬೈಲ್ ಬಳಕೆ ಹೆಚ್ಚಾದಂತೆ ಮಕ್ಕಳಲ್ಲಿ ಜ್ಞಾಪಕ ಶಕ್ತಿಯೂ ಕಡಿಮೆಯಾಗಿದೆ. ಮೊಬೈಲ್ ಗೀಳಿಗೆ ಬಿದ್ದ ಮಕ್ಕಳು ಜನಗಳ ಜೊತೆಗೆ ಬೆರೆಯುವುದನ್ನು ಕಡಿಮೆ ಮಾಡಿದ್ದಾರೆ. ಇದರಿಂದ ಮಕ್ಕಳ ಕೌಶಲ್ಯವೂ ಕುಂಠಿತವಾಗುತ್ತದೆ. ಮೊಬೈಲ್ ನಲ್ಲಿ ಬರುವ ರೀಲ್ಸ್, ಗೇಮ್ ಗಳು ಮಕ್ಕಳನ್ನು ಅಡಿಕ್ಟ್ ಮಾಡಿವೆ. ಗೇಮ್ ಆಡಲು ಹೋಗಿ ಅದೆಷ್ಟೋ ಮಕ್ಕಳು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮಕ್ಕಳಿಗೆ ಮೊಬೈಲ್ ನಿಷೇಧದ ತೀರ್ಮಾನ ತುಂಬಾನೇ ಒಳ್ಳೆಯ ನಿರ್ಧಾರವೆಂದೆ ಶ್ಲಾಘಿಸಿದ್ದಾರೆ ಸಾರ್ವಜನಿಕರು. ಶಾಲೆಯಲ್ಲಿ ಮಾತ್ರ ನಿಷೇಧವಾಗದೆ ಪೋಷಕರು ಮನೆಯಲ್ಲೂ ಮೊಬೈಲ್ ನಿಷೇಧ ಮಾಡಿದರೆ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...