ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.
ರೈತರಿಗೆ ಸಂಬಂಧಿಸಿದ ಸ್ಥಗಿತಗೊಂಡಿದ್ದ ‘ಕೃಷಿಭಾಗ್ಯ ಯೋಜನೆ’ಗೆ ಮರು ಚಾಲನೆ ನೀಡುವುದಾಗಿ ಘೋಷಿಸಿದ್ದಾರು. ಇದೀಗ ಬಜೆಟ್ ನಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುವುದು. 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ನೀಡಲಾಗಿದೆ.ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕರ್ನಾಟಕದ 50ಕ್ಕೂ ಹೆಚ್ಚು ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ನೀಡಲು ನಿರ್ಧರಿಸಲಾಗಿದೆ.
7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡ ಸ್ಥಾಪನೆ 468 ಕೋಟಿ ವೆಚ್ಚದಲ್ಲಿ ಬಿತ್ತನೆ ಬೀಜ ವಿತರಣೆ. ಬೆಳಗಾವಿ ಕಲ್ಬುರ್ಗಿಯಲ್ಲಿ ಕುರಿ ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುತ್ತದೆ.ಅಲ್ಲದೇ ಹಸು ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











