ಬಜೆಟ್: ಕೃಷಿ-ತೋಟಗಾರಿಕೆ-ಪಶುಸಂಗೋಪನೆಗೆ ಕ್ಷೇತ್ರದ ಬಗ್ಗೆ ಇಲ್ಲಿದೆ ಮುಖ್ಯಾಂಶ

2 Min Read

ಕೃಷಿ ವಲಯ

ರೈತರ ಆದಾಯ ವೃದ್ಧಿಗಾಗಿ ₹100 ಕೋಟಿ ವೆಚ್ಚದಲ್ಲಿ ಮುಂದಿನ 3 ವರ್ಷಗಳಲ್ಲಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆಯ ಅನುಷ್ಠಾನ.
ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ ‘ವಸುಧಾಮೃತ’ ಕಾರ್ಯಕ್ರಮ ಜಾರಿ.
ಬೆಳೆಗಳಿಗೆ ಕೀಟ ಹಾಗೂ ರೋಗಗಳಿಂದ ರಕ್ಷಣೆಗಾಗಿ ‘ಸಸ್ಯ ಸಂಜೀವಿನಿ’ ಯೋಜನೆ ಜಾರಿ
ಎಐ ತಂತ್ರಜ್ಞಾನದೊಂದಿಗೆ ಕೃಷಿ ಇಲಾಖೆಯ ʼರೈತ ಕರೆ ಕೇಂದ್ರʼಗಳ ಉನ್ನತೀಕರಣ.
ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣ
ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.
ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ‘ರೈತ ಮಾಲ್‌’ಗಳ ಸ್ಥಾಪನೆ.

ತೋಟಗಾರಿಕೆ
ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ.
ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ.
ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ₹64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ.
ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ.

ಪಶುಸಂಗೋಪನೆ
2026-27 ನೇ ಸಾಲಿನಲ್ಲಿ ನಬಾರ್ಡ್‌ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ.
* ₹10 ಕೋಟಿ ವೆಚ್ಚದಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗೆ.
ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪನೆ.
ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ₹5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ.

Share This Article