ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ʻಇ-ಕೋರ್ಟ್ʼ ಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಣೆಗೊಳಿಸಲು ಮೂಲಭೂತ ಸೌಕರ್ಯಗಳಾದ ಕೋರ್ಟ್ ಕಟ್ಟಡ ಹಾಗೂ ನ್ಯಾಯಾಧೀಶರಿಗೆ ವಸತಿ ಗೃಹ ನಿರ್ಮಾಣಕ್ಕಾಗಿ 175 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಂದಿನ ಮುಖ್ಯ ನ್ಯಾಯಮೂರ್ತಿ ಎಎಸಿ ಓಕ್ ಅವರ ನೇತೃತ್ವದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ವರ್ಚುವಲ್ ಕಾನ್ಫರೆನ್ಸ್ ವ್ಯವಸ್ಥೆಯನ್ನು ಪರಿಚಯಿಸಲಾಯಿತು. ಆ ಬಳಿಕ ಸುಪ್ರೀಂ, ಹೈಕೋರ್ಟ್ ಗಳೂ ಸೇರಿ ದೇಶದ ಎಲ್ಲ ಕೋರ್ಟ್ ಗಳೂ ಇದೇ ಮಾದರಿಯನ್ನು ಅನುಸರಿಸಿ ಯಶಸ್ವಿಯಾದವು.
ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಿ ಕಡಿಮೆ ಮಾಡಬಹುದಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಇರುವ ನ್ಯಾಯಾಧೀಶರು ಮತ್ತು ವಕೀಲರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಸರ್ಕಾರದಿಂದ ರಚಿಸಲ್ಪಡುವ ಎಲ್ಲಾ ಕಾನೂನುಗಳನ್ನು ಕನ್ನಡದಲ್ಲಿ ಸಿದ್ಧಪಡಿಸಲಾಗುವುದು. ಅಲ್ಲದೇ, ಕೇಂದ್ರ ಸರ್ಕಾರವು ಇಲ್ಲಿಯವರೆಗೂ ಅಧಿನಿಯಮಿಸಿದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












