ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್ನಲ್ಲಿ ಚಿತ್ರದುರ್ಗಕ್ಕೆ ತಾರಾಲಯ ಸ್ಥಾಪನೆಗೆ 4 ಕೋಟಿ ಮೀಸಲು ಇಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ಹವ್ಯಾಸಿ ಖಗೋಳ ವೀಕ್ಷಕ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ.
ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಜನಸಾಮಾನ್ಯರಿಗೆ ಖಗೋಳ ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿಸಲು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಾಯಕವಾಗುವುದು. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಉತ್ಸಾಹ ತುಂಬಲು ಅನುಕೂಲವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















