Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇದು ಕೇವಲ ಅಂಕಿ-ಅಂಶಗಳ ಮಾಯಾಜಾಲದ ಬಜೆಟ್ : ಸಂಸದ ಗೋವಿಂದ ಎಂ. ಕಾರಜೊಳ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ 2026-27 ನೇ ಸಾಲಿನ ಆಯವ್ಯಯವು ರಾಜ್ಯವನ್ನು ಸಾಲದ ಕೂಪಕ್ಕೆ ದೂಡುವ “ದಿವಾಳಿ ಬಜೆಟ್” ಆಗಿದೆ ಎಂದು ಸಂಸದ ಗೋವಿಂದ ಎಂ. ಕಾರಜೊಳ ಟೀಕಿಸಿದ್ದಾರೆ.

ಯಾವುದೇ ಹೊಸ ಕೈಗಾರಿಕೆಗಳ ಸ್ಥಾಪನೆ ವಿಚಾರವಿಲ್ಲ, ರೈತರಿಗೆ ನೆರವಿನ ಸಹಾಯಹಸ್ತವಿಲ್ಲದ ಇದೊಂದು ಕೇವಲ ಅಂಕಿ ಅಂಶಗಳ ಮಾಯಾಜಾಲದ ಬಜೆಟ್ ಆಗಿದೆ. ರಾಜ್ಯದ ಒಟ್ಟು ಸಾಲ 8.24 ಲಕ್ಷ ಕೋಟಿ ದಾಟುತ್ತಿರುವುದು ಆತಂಕಕಾರಿಯಾಗಿದೆ. ಸಿದ್ದರಾಮಯ್ಯನವರ ಬಜೆಟ್ ರಾಜ್ಯದ ಜನರ ಆಶೋತ್ತರಗಳಿಗೆ ತಣ್ಣೀರು ಎರಚಿದೆ.

 

ಕರ್ನಾಟಕ ರಾಜ್ಯದಲ್ಲಿ ಸರ್ಕಾರದ ಆರ್ಥಿಕ ಶಿಸ್ತನ್ನು ಕಾಪಾಡಲು ಮತ್ತು ಅನಗತ್ಯ ಸಾಲದ ಹೊರೆ ತಡೆಯಲು ಜಾರಿಗೆ ತಂದಿರುವ “ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮ-2002” ರನ್ನು ಉಲ್ಲಂಘಿಸುವ ಅಂಚಿಗೆ ಸಿದ್ದರಾಮಯ್ಯನವರು ಬಂದು ತಲುಪಿದ್ದಾರೆ.

 

ರಾಜ್ಯದ ಒಟ್ಟು ಆಂತರಿಕ ಉತ್ಪನ್ನದ ಮೇಲೆ ಸಾಲದ ಮಿತಿ ರಾಜ್ಯದ ಆರ್ಥಿಕ ಹೊಣೆಗಾರಿಕೆ ನಿಯಮಗಳ ಪ್ರಕಾರ ಹಣಕಾಸಿನ ಕೊರತೆಯನ್ನು ರಾಜ್ಯದ ಒಟ್ಟು ಉತ್ಪನ್ನದ ಶೇಕಡ 3 ರಷ್ಟು ಮಿತಿಯಲ್ಲಿ ಕಾಯ್ದುಕೊಳ್ಳಬೇಕು, ಸಿದ್ದರಾಮಯ್ಯನವರ ಬಜೆಟ್ ಶೇಕಡ 2.95 ರಷ್ಟಿದೆ ಎಂದರೆ ಇದೊಂದು ಅಂಕಿ ಅಂಶಗಳ ಮಾಯಜಾಲದ ಬಜೆಟ್ ಅಲ್ಲದೇ ಮತ್ತಿನ್ನೇನು. ರಾಜಸ್ವ ಕೊರತೆಯನ್ನು ಕಡಿಮೆ ಮಾಡಬೇಕಿದ್ದ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸಾಲದ ಮೇಲೆ ಸಾಲ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...