Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇತಿಮಿತಿಯಲ್ಲಿ ಸಾಲ‌ ಮಾಡಿದ್ದೇವೆ : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

---Advertisement---

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಅವರ ಬಜೆಟ್ ನಂತರ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮಾಡಿರುವ ಸಾಲದ ಬಗ್ಗೆ ಮಾತನ್ನಾಡಿದರು. ಆದರೆ ಸಿದ್ದರಾಮಯ್ಯ ಅವರು ಈ ಸಾಲದ ಬಗ್ಗೆ ಅಲ್ಲಗಳೆದಿದ್ದಾರೆ. ಅದಕ್ಕೆ ಒಂದಿಷ್ಟು ಸ್ಪಷ್ಟನೆಯನ್ನು ನೀಡಿದ್ದಾರೆ.

ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ. ಅದನವನ ಇತಿಮಿತಿಯಲ್ಲಿಯೇ ಸಾಲ ಮಾಡಲಾಗಿರುವುದು. ಕೇಂದ್ರದ ಸಾಲ 212 ಲಕ್ಷ ಕೋಟಿ ರೂಪಾಯಿವೆ ಏರುವ ಅಂದಾಜು ಇದೆ. ಅದು ಜಿಡಿಪಿಯ ಶೇಕಡ 55ಕ್ಕಿಂತ ಹೆಚ್ಚು. ತಾವು ಪರಿಮಿತಿಯಲ್ಲೇ ಸಾಲ ಮಾಡಿದ್ದೇವೆ. ನಾವೂ ಅಧಿಕಾರಕ್ಕೆ ಬಂದಾಗ ಸಾಲ 5.54 ಲಕ್ಷ ಕೋಟಿ ರೂಪಾಯಿ ಸಾಲ ಇತ್ತು. ಆದರೆ ಈಗ ಸಾಲ 8.14 ಲಕ್ಚ ಕೋಟಿ ರೂಪಾಯಿ ಆಗುತ್ತದೆ.

ಫಿಸ್ಕಲ್ ರೆಸ್ಪನ್ಸಿಬಲ್ ಆ್ಯಕ್ಟ್ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇಕಡ 3ರ ಒಳಗೆ ಇರಬೇಕು. ಸಾಲವು ಶೇಕಡ 25ರ ಒಳಗೆ ಇರಬೇಕು. ಕರ್ನಾಟಕದ ಜಿಡಿಇಪಿ ಮುಂದಿನ ವರ್ಷ 33 ಲಕ್ಷ ಕೋಟಿ ರೂಪಾಯಿ ಆಗುತ್ತದೆ. ಹೀಗಾಗಿ ಕಾಯ್ದೆ ವಿಧಿಸಿರುವ ಮಿತಿಯೊಳಗೆ ಸಾಲವನ್ನು ಮಾಡಲಾಗಿದೆ. ಅತ್ತ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮಾಡುತ್ತಿದೆ. ಜಿಎಸ್​ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಆದರೆ, ಕರ್ನಾಟಕಕ್ಕೆ ಜಿಎಸ್​ಟಿ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ. ಈ ವರ್ಷ ನಮಗೆ ಜಿಎಸ್​ಟಿ ಹಂಚಿಕೆಯಲ್ಲಿ 10,000 ಕೋಟಿ ರೂ ಕೊರತೆಯಾಗಿದೆ. ಮುಂದಿನ ವರ್ಷ 15,000 ರೂಪಾಯಿ‌ ಕಡಿಮೆ ಆಗುವ ಅಂದಾಜು ಇದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...