ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2025ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು ಈ ಬಾರಿ ಈ ಬಿಜೆಪಿ ನಾಯಕನ ಮಗ ಮೂರನೇ ಟಾಪರ್ ಆಗಿ ಹೊರಹೊಮ್ಮಿದ್ದಾನೆ.ಯುಪಿಎಸ್‌ಸಿ ಫಲಿತಾಂಶದಲ್ಲಿ ಬಿಜೆಪಿ ನಾಯಕ ಕೃಷ್ಣ ಧುಲ್ ಅವರ ಪುತ್ರ ಏಕಾಂಶ್ ಧುಲ್ ದೇಶದಲ್ಲಿ ಮೂರನೇ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.
ಯುಪಿಎಸ್‌ಸಿ ಪರೀಕ್ಷೆಯು ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದು. ಇದರಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದು ಅತ್ಯಂತ ಅಪರೂಪ ಮತ್ತು ಪ್ರತಿಭಾವಂತರಿಗೆ ಮಾತ್ರ ಸಾಧ್ಯವಾಗುವ ಸಾಧನೆ. ಏಕಾಂಶ್ ಇದು ಮೂರನೇ ಬಾರಿ ಆಯ್ಕೆಯಾಗಿದ್ದಾರೆ.
ಕೃಷ್ಣ ಧುಲ್ ಹರಿಯಾಣ ಬಿಜೆಪಿಯ ಹಿರಿಯ ನಾಯಕರಾಗಿದ್ದು, ಪ್ರಸ್ತುತ ಪಕ್ಷದ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಹರಿಯಾಣ ರಾಜ್ಯ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಏಕಾಂಶ್ ಅವರ ತಾಯಿ ನಿರ್ಮಲ್ ಧುಲ್ ಪಂಚಕುಲದ ಸೆಕ್ಟರ್ 19ರ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಪ್ರಾಂಶುಪಾಲರಾಗಿದ್ದಾರೆ.
ಏಕಾಂಶ್ ದೆಹಲಿಯ ಪ್ರತಿಷ್ಠಿತ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಿಂದ ಬಿಎ (ಆನರ್ಸ್) ಪದವಿ ಪಡೆದರು. ದೆಹಲಿಯಲ್ಲೇ ಯುಪಿಎಸ್‌ಸಿ ತರಬೇತಿ ಪಡೆದುಕೊಂಡು ಪರೀಕ್ಷೆಗೆ ತಯಾರಾದರು. ಏಕಾಂಶ್ ಯುಪಿಎಸ್‌ಸಿಯಲ್ಲಿ ಮೊದಲ ಬಾರಿ ಆಯ್ಕೆಯಾದಾಗ ಉತ್ತಮ ರ್ಯಾಂಕ್ ಪಡೆದರು. 2024ರಲ್ಲಿ 342ನೇ ರ್ಯಾಂಕ್ ಗಳಿಸಿದರು. 2025ರಲ್ಲಿ ಯುಪಿಎಎಸ್‌ಪಿಯಲ್ಲಿ 295ನೇ ರ್ಯಾಂಕ್ ಪಡೆದರು.ಈಗ ಅಂತಿಮ ಫಲಿತಾಂಶದಲ್ಲಿ ದೇಶದ ಮೂರನೇ ಸ್ಥಾನ ಪಡೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












