ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.
ಬೆಂಗಳೂರು
ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ
119 ಕೆರೆಗಳಿಗೆ ಏತ ನೀರಾವರಿ ಯೋಜನೆ.
ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.
ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ
ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ.
ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು.
ಮೈಸೂರು
ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.
ಡಿ.ಡಿ. ಅರಸ್ ಕಾಲುವೆಯ ಪುನರ್‌ವಿನ್ಯಾಸ.
ಮೈಸೂರು ತಾಲ್ಲೂಕಿನ ಬಿದ್ರಹಳ್ಳಿಹುಂಡಿ ಬಳಿ ಕಾಲುವೆಯ ಆಧುನೀಕರಣ.
ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಕಾಲುವೆಯ ಆಧುನೀಕರಣ.
ಕಬಿನಿ ಬಲದಂಡೆ ನಾಲೆಯ ವಿತರಣಾ ನಾಲೆ ಸಂ.35ರ ಆಧುನೀಕರಣ.
ಟಿ. ನರಸೀಪುರ ತಾಲ್ಲೂಕಿನ ರಾಜರಾಜೇಶ್ವರಿ ಕಾಲುವೆ ಹಾಗೂ ಹರೋಹಳ್ಳಿ ಹೈ ಲೆವೆಲ್ ಕಾಲುವೆಗಳ ಸುಧಾರಣೆ.
ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಹೈ ಲೆವೆಲ್ ಹಾಗೂ ಲೋ ಲೆವೆಲ್ ಕಾಲುವೆಗಳ ಆಯಕಟ್ಟನ್ನು ಹೆಚ್ಚಿಸಲು ನೀರನ್ನು ಎತ್ತುವ ಯೋಜನೆ.
ಟಿ. ನರಸಿಪುರ ತಾಲ್ಲೂಕಿನ ಆರ್.ಪಿ. ಕಾಲುವೆಯ ಹರೋಹಳ್ಳಿ ಪಿಕಪ್ ಕಾಲುವೆ ಹಾಗೂ ಬಂಡಿಬಚ್ಚಲು ಶಾಖಾ ಕಾಲುವೆಯ ಸುಧಾರಣೆ.
ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
ಮೈಸೂರು ತಾಲ್ಲೂಕಿನ ಚಿಕ್ಕಂಕನಹಳ್ಳಿ ಕೆರೆಯ ಅಡಿಯಲ್ಲಿ ಇರುವ ಕಿಗ್ಗಾಲುವೆ ಮತ್ತು ಮೆಗ್ಗಾಲುವೆಗಳ ಆಧುನೀಕರಣ.
ಕಬಿನಿ ಅಣೆಕಟ್ಟೆಯ ಮೇಲ್ಬಾಗದಲ್ಲಿ ಪುನರುಜ್ಜೀವನ ಕಾಮಗಾರಿ.
ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆ.
ವರುಣಾ ಕೆರೆಯ ಪುನರುಜ್ಜೀವನ ಮತ್ತು ಸಂರಕ್ಷಣೆ.
ಟಿ. ನರಸೀಪುರ ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ವಿವಿಧ ಶಾಖಾ ನಾಲೆಗಳ ಅಭಿವೃದ್ಧಿ.
ಕಬಿನಿ ಎಡದಂಡೆ ನಾಲೆಯ ಅಭಿವೃದ್ಧಿ.
ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಸರಣಿ ಚೆಕ್ ಡ್ಯಾಂ ನಿರ್ಮಾಣ.
ವರುಣ ಕ್ಷೇತ್ರದ ಗ್ರಾಮಗಳ ಕೆರೆಗಳಿಗೆ ಏತ ನೀರಾವರಿ ಕಾಮಗಾರಿ.
ಮೈಸೂರು ಜಿಲ್ಲೆಯ ಕರಿಗಳ ಕೆರೆ ಹಾಗೂ ನಾಲೆ ಅಭಿವೃದ್ಧಿ.
ಮೈಸೂರು ಜಿಲ್ಲೆಯ ಹೆಮ್ಮಿಗೆ-ಮುದುಗನೂರು ಫೀಡರ್ ನಾಲೆ ಅಭಿವೃದ್ಧಿ.
ನಂಜನಗೂಡು ತಾಲ್ಲೂಕು ಕಾರ್ಯಗ್ರಾಮದಲ್ಲಿರುವ ಇಂಗು ಕೆರೆಯ ಅಭಿವೃದ್ಧಿ ಕಾಮಗಾರಿ.
ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.
ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು.
ತುಮಕೂರಿಗೆ ಸಿಕ್ಕಿದ್ದೇನು?
ಜಿಲ್ಲೆಯ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಣ.
ಸಾರಿಗೆ ಇಲಾಖೆಯ ವತಿಯಿಂದ ಐದು ಕೋಟಿ ರೂ. ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ನಿರ್ಮಾಣ.
ಚಿಕ್ಕನಾಯಕನಹಳ್ಳಿ ಮತ್ತು ಶಿರಾ ತಾಲ್ಲೂಕುಗಳಲ್ಲಿ ಹೊಸ ಚೆಕ್ ಡ್ಯಾಂಗಳನ್ನು ನಿರ್ಮಾಣಕ್ಕೆ ನಿರ್ಧಾರ.
ಗೂಳೂರು-ಹೆಬ್ಬೂರು ಭಾಗಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಅನುಷ್ಠಾನ.
ದಾವಣಗೆರೆಗೆ ಬಜೆಟ್ ಪಾಲು
ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ಹೊನ್ನಾಳಿ ತಾಲ್ಲೂಕಿನಲ್ಲಿ ಬೃಹತ್ ಶೀತಲಗೃಹ ನಿರ್ಮಾಣ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು.
ಆನಗೋಡು ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪೊಲೀಸ್ ಠಾಣೆ.
ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (ಪಿಎಸ್‌ಸಿ) ಸಮುದಾಯ ಆರೋಗ್ಯ ಕೇಂದ್ರವನ್ನಾಗಿ (ಸಿಎಚ್‌ಸಿ) ಉನ್ನತೀಕರಿಸಲಾಗುವುದು.
ಹೊನ್ನಾಳಿ ಪಟ್ಟಣದಲ್ಲಿ ಹೊಸ KSRTC ಬಸ್ ನಿಲ್ದಾಣ ಅಭಿವೃದ್ಧಿ.
ದಾವಣಗೆರೆಯಲ್ಲಿ ಮೀನು ಮಾರಾಟ ಪ್ರೋತ್ಸಾಹಿಸಲು ಮತ್ಸ್ಯದರ್ಶಿನಿ ಆರಂಭ.
ಶಿವಮೊಗ್ಗಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದಲ್ಲಿ ವಿಮಾನಗಳ ತಯಾರಿಕೆ ಮತ್ತು ಜೋಡಣೆ ಚಟುವಟಿಕೆಗಳ ಪ್ರಾರಂಭ.
ತೀರ್ಥಹಳ್ಳಿ ತಾಲ್ಲೂಕಿನ ಕೋಡೂರು ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ ಮತ್ತು ರಿವಿಟ್ಮೆಂಟ್ ನಿರ್ಮಾಣ.
ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಹೊಳೆಗೆ ಬ್ಯಾರೇಜ್ ನಿರ್ಮಾಣ ಕಾಮಗಾರಿ.
ಧಾರವಾಡಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ಕಾರ್ಮಿಕರ ಮಕ್ಕಳ ನೈಪುಣ್ಯತೆ ಹೆಚ್ಚಿಸಲು 200 ಕೋಟಿ ರೂ. ವೆಚ್ಚದ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆ.
ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ನಾಲ್ಕು ʻವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ʼಗಳ ಪ್ರಾರಂಭ.
ಧಾರವಾಡ ಕೈಗಾರಿಕಾ ನೋಡ್ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದಲ್ಲಿ ಭೂಸ್ವಾಧೀನ ಪ್ರಕ್ರಿಯೆ.
ಹಾವೇರಿ ಜಿಲ್ಲೆಗೆ ಬಜೆಟ್‌ನಲ್ಲಿ ಕೊಡುಗೆಗಳೇನು?
ತಿಳುವಳ್ಳಿ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪೊಲೀಸ್ ಠಾಣೆ ಸ್ಥಾಪನೆ.
ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಚಾಲನೆ.
ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಯೋಜನೆ.
ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ.




