Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಬಜೆಟ್ | ಜನರ ದಿಕ್ಕುತಪ್ಪಿಸುವ ಅಂಕಿ-ಅಂಶಗಳ ಕಟ್ಟುಕತೆ : ಬಿ.ಸಿ. ಹನುಮಂತೇಗೌಡ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 07 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಆಯವ್ಯಯವು ಜನಸಾಮಾನ್ಯರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಇದು ದಿಕ್ಕು ದಿಸೆಯಿಲ್ಲದ, ಕೇವಲ ಮತಬ್ಯಾಂಕ್ ರಾಜಕಾರಣ ದೃಷ್ಟಿಯಲ್ಲಿ ಸಿದ್ಧವಾಗಿರುವ, ಜನರ ದಿಕ್ಕು ತಪ್ಪಿಸುವ ಅಂಕಿ-ಅಂಶಗಳ ಕಟ್ಟು ಕಥೆಯಾಗಿದೆ ಎಂದು ಬಿಜೆಪಿ ಮುಖಂಡರಾದ ಬಿ.ಸಿ. ಹನುಮಂತೇಗೌಡ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ,ಗೆ ಏರಿಸಲಾಗಿದೆ. ಆದರೆ ಇದರಲ್ಲಿ ಬಹುಪಾಲು ಸಾಲದ ಮೂಲಕವೇ ಭರಿಸಲಾಗುತ್ತಿದೆ. ಈ ಸಾಲದ ಹೊರೆಯಿಂದ ಮುಂದಿನ ಪೀಳಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ಗ್ಯಾರಂಟಿ ಯೋಜನೆಗಳ ಅಬ್ಬರದಲ್ಲಿ ರಾಜ್ಯದ ನೀರಾವರಿ, ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳಿಗೆ ಅಗತ್ಯ ಇರುವಷ್ಟು ಅನುದಾನ ಸಿಕ್ಕಿಲ್ಲ. ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕೆಲಸಗಳು ಈ ಬಾರಿಯೂ ಕುಂಟುತ್ತಾ ಸಾಗಲಿವೆ ಎಂದು ದೂರಿದರು.
ಬರ ಮತ್ತು ಪ್ರವಾಹದಿಂದ ಕಂಗೆಟ್ಟಿರುವ ರೈತರಿಗೆ ಸಾಲ ಮನ್ನಾ ಅಥವಾ ವಿಶೇಷ ಪ್ಯಾಕೇಜ್ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. 56,432 ಹುದ್ದೆಗಳ ನೇಮಕಾತಿ ಮತ್ತು ವಯೋಮಿತಿ ಸಡಿಲಿಕೆ ಘೋಷಣೆಗಳು ಕೇವಲ ಚುನಾವಣಾ ಗಿಮಿಕ್ ಆಗಿವೆ. ಖಾಲಿ ಹುದ್ದೆಗಳ ಭರ್ತಿಯ ಭರವಸೆಯನ್ನು ಕಳೆದ ಮೂರು ಬಜೆಟ್‍ಗಳಲ್ಲಿಯೂ ನೀಡಲಾಗಿದೆ. ಆದರೆ, ಈವರೆಗೆ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ವಯೋಮಿತಿ ಸಡಿಲಿಕೆ ಎಂಬುದು ಕೇವಲ ಯುವಕರನ್ನು ಹಾದಿ ತಪ್ಪಿಸುವ ತಂತ್ರವಾಗಿದೆ. ಬೆಂಗಳೂರಿನ ಟನಲ್ ರಸ್ತೆ ಮತ್ತು ಬಿಸಿನೆಸ್ ಕಾರಿಡಾರ್ ಯೋಜನೆಗಳು ಕೇವಲ ಕಾಗದದ ಮೇಲಿವೆ. ಈ ಯೋಜನೆಗಳಿಗೆ ಅಗತ್ಯವಿರುವ ಬೃಹತ್ ಮೊತ್ತವನ್ನು ಎಲ್ಲಿಂದ ತರುತ್ತಾರೆ ಎಂಬ ಸ್ಪಷ್ಟತೆ ಬಜೆಟ್‍ನಲ್ಲಿ ಇಲ್ಲ ಎಂದಿದ್ದಾರೆ.
ಜನರ ಮೇಲೆ ತೆರಿಗೆಗಳ ಹೊರೆ ಹೆಚ್ಚಾಗುವ ಸಾಧ್ಯತೆಯನ್ನು ಈ ಬಜೆಟ್ ಪರೋಕ್ಷವಾಗಿ ಸೂಚಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ನಲುಗಿರುವ ಜನಸಾಮಾನ್ಯರಿಗೆ, ಈ ಬಜೆಟ್ ಯಾವುದೇ ಸಮಾಧಾನ ತಂದಿಲ್ಲ. ರಾಜ್ಯದ ಆರ್ಥಿಕ ಭವಿಷ್ಯವನ್ನು ಅಧೋಗತಿಗೆ ಕೊಂಡೊಯ್ಯುವ ರೀತಿಯಲ್ಲಿ ಮಂಡಿಸಲಾದ ಆಯವ್ಯಯವು, ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಜೆಟ್, ವಾಸ್ತವಿಕ ನೆಲೆ ಕಳೆದು ಕೊಂಡಿದ್ದು, ರಾಜ್ಯದ ಜನತೆಗೆ ನೀಡಿರುವ ತೀವ್ರ ನಿರಾಶಾದಾಯಕ ಬಜೆಟ್ ಎಂದು ಬಿಜೆಪಿ ಮುಖಂಡರಾದ ಬಿ.ಸಿ. ಹನುಮಂತೇಗೌಡ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now