Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ : ನಾಳೆ ಪೂರ್ವಭಾವಿ ಸಭೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 07 : ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಮೀಸಲಾತಿಯನ್ನು ನೀಡದೆ ದಿಕ್ಕು ತಪ್ಪಿಸಿ ದಲಿತ ಸಮುದಾಯಗಳಿಗೆ ದ್ರೋಹವೆಸಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನದ ರೂಪು ರೇಷೆಗಳನ್ನು ರೂಪಿಸುವ ಸಲುವಾಗಿ ಮಾ. 8ರ ಭಾನುವಾರ ಬೆಳಿಗ್ಗೆ 10ಕ್ಕೆ  ಚಿತ್ರದುರ್ಗದ ವಾಲ್ಮೀಕಿ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು  ಭಾರತೀಯ ಜನತಾ ಪಾರ್ಟಿಯ ಎಸ್.ಟಿ.ಮೋರ್ಚಾದ ರಾಜ್ಯದ್ಯಕ್ಷರಾದ ಬಂಗಾರು ಹನುಮಂತ ಹಾಗೂ ಎಸ್.ಸಿ. ಮೋರ್ಚಾದ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು ತಿಳಿಸಿದ್ದಾರೆ.

ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿಗಳು ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ರಾದ ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಎಸ್.ಟಿ., ಎಸ್.ಸಿ.ಸಮುದಾಯದ ಹಾಲಿ ಮಾಜಿ ಸಂಸದರು,  ಶಾಸಕರುಗಳು, ಹಿರಿಯ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.

ಈ ಸಂಬಂಧ ಚಿತ್ರದುರ್ಗ ನಗರದ ಜಗಳೂರು ಮಹಾಲಿಂಗಪ್ಪ ಸಭಾಂಗಣದಲ್ಲಿ ಶನಿವಾರ ಭಾರತೀಯ ಜನತಾ ಪಾರ್ಟಿವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿ ಯಾನ-2026″ರ ದಾವಣಗೆರೆ ವಿಭಾಗ ವಿಷಯ ಪ್ರಮುಖರ ಕಾರ್ಯಗಾರದಲ್ಲಿ ಇದಕ್ಕೆ ಸಂಬಂಧಪಟ್ಟಂತೆ ಭಿತ್ತಿ ಪತ್ರವನ್ನು ಪಕ್ಷದ ಮುಖಂಡರು ಬಿಡುಗಡೆ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now