Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾ.16 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ : ವಿಶ್ವನಾರಾಯಣಮೂರ್ತಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಒಳ ಮೀಸಲಾತಿಗೊಳಪಡಿಸದೆ 56,432 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ವಿರೋಧಿಸಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಜಂಟಿಯಾಗಿ ಮಾ.16 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ತಿಳಿಸಿದರು.

ಪ್ರತಿಭಟನೆ ಸಂಬಂಧ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸುಪ್ರೀಂಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಅದರಂತೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸದೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ನಾವುಗಳು ಸಹಿಸುವುದಿಲ್ಲ. ಒಳ ಮೀಸಲಾತಿಗಾಗಿಯೇ 35 ವರ್ಷಗಳಿಂದಲೂ ನಡೆಯುತ್ತಿರುವ ಹೋರಾಟಕ್ಕೆ ನ್ಯಾಯ ಸಿಗಬೇಕೆಂಬುದು ನಮ್ಮ ಉದ್ದೇಶ ಎಂದು ವಿಶ್ವನಾರಾಯಣಮೂರ್ತಿ ಹೇಳಿದರು.

 

ಜಸ್ಟಿಸ್ ನಾಗಮೋಹನ್‍ದಾಸ್ ಆಯೋಗ ನೀಡಿರುವ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ಫೆ.26 ರಂದು ರಾಜ್ಯಪಾಲರ ಸಹಿ ಪಡೆದು ಕಾಯಿದೆ ಅನುಮೋದನೆಗೊಂಡಿದ್ದರು. ಒಳ ಮೀಸಲಾತಿ ಅನ್ವಯ ಹುದ್ದೆಗಳನ್ನು ನೇಮಕ ಮಾಡಿಕೊಳ್ಳದೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ಗಮನಿಸಿದರೆ ರಾಜ್ಯ ಸರ್ಕಾರ ಮಾದಿಗರ ವಿರೋಧಿ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಆದ್ದರಿಂದ ಮಾ.16 ರಂದು ರಾಜ್ಯಾದ್ಯಂತ ತಮಟೆ ಚಳುವಳಿ, ಘೇರಾವ್, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಕಾವನ್ನು ಹೆಚ್ಚಿಸಲಾಗುವುದು. ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಶ್ವನಾರಾಯಣಮೂರ್ತಿ ಮನವಿ ಮಾಡಿದರು.

 

ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಾಧ್ಯಕ್ಷ ಜಿ.ಗುರುಮೂರ್ತಿ, ಜಿಲ್ಲಾ ಸಂಚಾಲಕ ಹೆಚ್.ಶಿವಮೂರ್ತಿ ಬಹದ್ದೂರ್‍ಘಟ್ಟ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಚಿಕ್ಕಗೊಂಡನಹಳ್ಳಿ, ಗೌರವಾಧ್ಯಕ್ಷ ಚಂದ್ರಪ್ಪ ಚೇಳುಗುಡ್ಡ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

ಫೋಟೋ ವಿವರಣೆ : ಒಳ ಮೀಸಲಾತಿಗೆ ವಿರುದ್ದವಾಗಿ ರಾಜ್ಯ ಸರ್ಕಾರ 56,432 ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ಖಂಡಿಸಿ ಮಾ.16 ರಂದು ರಾಜ್ಯಾದ್ಯಂತ ನಡೆಯುವ ಹೋರಾಟ ಕುರಿತು ನಡೆದ ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಮಾತನಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now