Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಗುಣಗಾನ ಮಾಡಿದ ಸಿಎಂ ಸಿದ್ದರಾಮಯ್ಯ..!

---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸದ್ಯ ಸಿಎಂ ಕುರ್ಚಿ ಕಾದಾಟ ಜೋರಾಗಿಯೇ ನಡೀತಾ ಇದೆ. ಡಿಕೆ ಶಿವಕುಮಾರ್ ಸಾಧ್ಯವಾದಷ್ಟು ಹೈಕಮಾಂಡ್ ನಾಯಕರ ಬಳಿ ತಮ್ಮ ಬೇಡಿಕೆಯನ್ನು ಇಟ್ಟಿದ್ದಾರೆ. ಆದರೆ ಅದಕ್ಕಿನ್ನು ಅಸ್ತು ಎಂದಿಲ್ಲ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರದ್ದೇ ಎಲ್ಲಾ ಅಂತ ಅವರ ಮೇಲೆ ಹಾಕ್ತಾ ಇದ್ದಾರೆ. ಇದೀಗ ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಹಾಡಿ ಹೊಗಳಿದ್ದಾರೆ.

 

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ. ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...