Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಚಿತ್ರದುರ್ಗ. ಮಾರ್ಚ್ 11:  ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಡುಗೆ ಅನಿಲ ಸರಬರಾಜುದಾರ ಕಂಪನಿಗಳಾದ ಐಒಸಿಎಲ್ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಕುರಿತಂತೆ ಸೇಲ್ಸ್ ಅಧಿಕಾರಿಗಳಿಂದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲದ ದಾಸ್ತಾನು ಸಮರ್ಪಕವಾಗಿದ್ದು, ಸರಬರಾಜು ಸಹಜ ಸ್ಥಿತಿಯಲ್ಲೇ ಮುಂದುವರಿಯಲಿದೆ. ಅಡುಗೆ ಅನಿಲ ಸಿಲಿಂಡರ್ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆ ಮತ್ತು ಭಯದಿಂದಾಗಿ, ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲುಗಟ್ಟಿ ನಿಲ್ಲುವ, ಮುಗಿಬೀಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಗೃಹ ಬಳಕೆಯ  ಅಡುಗೆ ಅನಿಲದ ಸಿಲಿಂಡರ್‍ಗಳನ್ನು ವಾಣಿಜ್ಯ ಬಳಕೆಗೆ ಯಾವುದೇ ಗ್ರಾಹಕರು ನೀಡಿದ್ದು, ಕಂಡು ಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಐಒಸಿಎಲ್ ಸೇಲ್ಸ್ ಅಧಿಕಾರಿ ಭರತ್ ಚಂದ್ರ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿ ಸುಶ್ರಿಮ ಬೆಹ್ರ ಇದ್ದರು.
======================================

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...