Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎನ್‍ಸಿಸಿ ಕೆಡೆಟ್‌ಗಳಿಗೆ ಈ ಕಾಲೇಜಿನಲ್ಲಿ ಗೌರವಯುತ ಬೀಳ್ಕೊಡುಗೆ

---Advertisement---

ಸುದ್ದಿಒನ್, ಚಿತ್ರದುರ್ಗ. ಮಾ. 11: ಎನ್‍ಸಿಸಿ ತರಬೇತಿಯು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಕೆಚ್ಚೆದೆಯ ಧೈರ್ಯ, ನಾಯಕತ್ವದ ಗುಣ ಮತ್ತು ನಿಸ್ವಾರ್ಥ ಸೇವೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಎನ್‍ಸಿಸಿ ಅಧಿಕಾರಿ ಡಾ. ಎಚ್. ಸತೀಶ್ ನಾಯಕ್ ಅವರು ಹೇಳಿದರು.

 

ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಲಾ, ವಿe್ಞÁನ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ ಎನ್‍ಸಿಸಿ. ಸೀನಿಯರ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವರ್ಷವಿಡೀ ಕಠಿಣ ಪರಿಶ್ರಮದಿಂದ ತರಬೇತಿ ಪೂರೈಸಿದ ಕೆಡೆಟ್‍ಗಳು ದೇಶದ ಜವಾಬ್ದಾರಿಯುತ ಪ್ರಜೆಗಳಾಗಲೆಂದು ಶುಭ ಹಾರೈಸಿದರು.
ಮುಖ್ಯಅತಿಥಿ ಡಾ. ಎಸ್. ಆನಂದ್ ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ಎನ್‍ಸಿಸಿ ಒಂದು ಶಿಸ್ತಿನ ಪಾಠಶಾಲೆ. ಇಲ್ಲಿ ಕೇವಲ ಶಾರೀರಿಕ ದೃಢತೆ ಮಾತ್ರವಲ್ಲದೆ, ಮಾನಸಿಕ ಸದೃಢತೆಯೂ ಲಭಿಸುತ್ತದೆ. ಕೆಡೆಟ್‍ಗಳು ಇಲ್ಲಿ ಕಲಿತ ಸಮಯಪ್ರಜ್ಞೆ ಮತ್ತು ಶಿಸ್ತನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉನ್ನತ ಗುರಿ ತಲುಪಲು ಸಾಧ್ಯ ಎಂದು ಕಿವಿಮಾತು ಹೇಳಿದರು.

 

ಕಾಲೇಜಿನ ಐಕ್ಯೂಎಸಿ ಸಂಯೋಜಕರು ಮಾತನಾಡಿ, ಎನ್‍ಸಿಸಿ ಸಂಘಟನೆಯ ಇತಿಹಾಸ ಮತ್ತು ಅದರ ಮಹತ್ವವನ್ನು ವಿವರಿಸುತ್ತ ಯುವಜನತೆಯಲ್ಲಿ ಏಕತೆ ಮತ್ತು ಶಿಸ್ತನ್ನು ಮೂಡಿಸುವಲ್ಲಿ ಈ ಸಂಘಟನೆಯು ಭಾರತೀಯ ರಕ್ಷಣಾ ವ್ಯವಸ್ಥೆಯ ಎರಡನೇ ಸಾರಥಿಯಾಗಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಎಸ್.ಎಚ್. ಪಂಚಾಕ್ಷರಿ ಮಾತನಾಡಿ, ನಮ್ಮ ಕಾಲೇಜಿನ ಹೆಮ್ಮೆಯ ಎನ್.ಸಿ.ಸಿ. ಘಟಕವು ಶಿಸ್ತಿನ ನಡವಳಿಕೆಗೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ತಮಗೆ ಲಭಿಸಿರುವ ಈ ಸದವಕಾಶವನ್ನು ಬಳಸಿಕೊಂಡು ಸಾಧನೆಯ ಶಿಖರಕ್ಕೇರಬೇಕು. ನಿಮ್ಮ ಸಾಧನೆಯ ಮೂಲಕ ಕಾಲೇಜಿನ ಕೀರ್ತಿ ಪತಾಕೆಯನ್ನು ಹಾರಿಸಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ಎನ್‍ಸಿಸಿ ಕೆಡೆಟ್‍ಗಳು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now