ಸುದ್ದಿಒನ್, ಹೊಸದುರ್ಗ, ಮಾರ್ಚ್. 11 : ಅಪಘಾತಕ್ಕೊಳಗಾಗಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಬಂಗಾರದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಹೊಸದುರ್ಗ ಪೊಲೀಸರು ಬಂಧಿಸಿ ಆತನಿಂದ ಸುಮಾರು 8 ಲಕ್ಷ ರೂಪಾಯಿ ಬೆಲೆಬಾಳುವ 55 ಗ್ರಾಂ ತೂಕದ ಎರಡು ಎಳೆ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನನ್ನು ಹೊಸದುರ್ಗ ತಾಲ್ಲೂಕಿನ ಬಾಗೂರು ಕೋಡಿಹಳ್ಳಿ ಗ್ರಾಮದ ಗೊವಿಂದ ಸ್ವಾಮಿ (48 ವರ್ಷ) ಎಂದು ಗುರುತಿಸಲಾಗಿದೆ.
ಘಟನೆ ವಿವರ : ಮಾರ್ಚ್ 10 ರಂದು ಸಂಜೆ 4-30 ರ ಸಮಯದಲ್ಲಿ ಅಜ್ಜಂಪುರ ರಸ್ತೆಯ ಬೋಕಿಕೆರೆ ಗೇಟ್ ಬಳಿ ಮೋಟಾರ್ ಸೈಕಲ್ ಹಾಗೂ ಕಾರ್ ಡಿಕ್ಕಿಯಾಗಿ ಅಪಘಾತವಾಗಿತ್ತು. ಈ ವೇಳೆ ಮೊಟಾರು ಸೈಕಲ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಮೋಟಾರು ಸೈಕಲ್ ನಿಂದ ಕೆಳಗೆ ಬಿದ್ದಿದ್ದರಿಂದ ಗಾಯವಾಗಿದ್ದು ಪ್ರಜ್ಞೆ ತಪ್ಪಿದ್ದರು. ಈ ವೇಳೆ ಆ ಮಹಿಳೆಯ ಕೊರಳಲ್ಲಿದ್ದ 55 ಗ್ರಾಂ ಬಂಗಾರದ ಸರವು ಕಳ್ಳತನವಾಗಿತ್ತು. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಂಜಿತ್ ಕುಮಾರ್ ಬಂಡಾರು ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಚಿತ್ರದುರ್ಗ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ, ಶಿವಕುಮಾರ್ ಟಿ ಎಂ ಡಿ.ವೈ.ಎಸ್.ಪಿ ಹಿರಿಯೂರು ಇವರ ಉಸ್ತುವಾರಿಯಲ್ಲಿ ರಮೇಶ್ ಕೆ ಟಿ, ಪಿ.ಐ. ಹೊಸದುರ್ಗರವರ ನೇತೃತ್ವದಲ್ಲಿ ಹೊಸದುರ್ಗ ಪೊಲೀಸ್ ಠಾಣೆ ಶ್ರೀಶೈಲ ಪಿ.ಎಸ್.ಐ, ಮಹೇಶ್ ಕುಮಾರ್ ಎನ್, ಪಿ ಎಸ್ ಐ ಹಾಗೂ ಸಿಬ್ಬಂದಿಯವರಾದ ಕುಮಾರ್, ಉಮೇಶ, ಪಿಸಿ ಗಂಗಾದರ, ತಿಪ್ಪೇಸ್ವಾಮಿ, ಚಂದ್ರಪ್ಪ, ರಾಜಣ್ಣ ಚಾಲಕ, ಜಗದೀಶ್ ರವರ ತಂಡ ರಚಿಸಲಾಗಿತ್ತು.
ಪ್ರಕರಣದ ಬೆನ್ನತ್ತಿದ ಈ ತಂಡವು ಆರೋಪಿ ಪತ್ತೆಯ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಪರಶೀಲಿಸಿ ಮಾಹಿತಿ ಸಂಗ್ರಹಿಸಿ ಕೃತ್ಯ ನೆಡೆದ 12 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ ಆತನಿಂದ ಕಳುವಾದ ಚಿನ್ನದ ಸರವನ್ನು ವಶಕ೬ಪಡೆದಿರುತ್ತಾರೆ.
ಹೊಸದುರ್ಗ ಪೊಲೀಸರ ಈ ಕಾರ್ಯಾಚರಣೆಯನ್ನು ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಐ.ಪಿ.ಎಸ್ ರವರು ಶ್ಲಾಘಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













