Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯಕ್ಕೆ ಪ್ರಥಮ ರ‌್ಯಾಂಕ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾ. 12 : ರಾಜೀವ್‍ಗಾಂಧಿ ಯುನಿವರ್ಸಿಟಿ 2025-26ನೇ ಸಾಲಿನ ಪರೀಕ್ಷೆಯಲ್ಲಿ ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಎಂ.ಡಿ.ಎಸ್. ಸ್ನಾತಕೋತ್ತರ ವಿಭಾಗದಲ್ಲಿ ಡಾ. ಪದ್ಮಶ್ವೇತ ಎಸ್. ಪ್ರಥಮ ರ‌್ಯಾಂಕ್, ಡಾ. ಸಾಧನ ಎಸ್.ಎಂ. 5ನೇ ರ‌್ಯಾಂಕ್ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಡಾ. ಬೃಂದಾ ಕೆ. ಪ್ರಥಮ ರ‌್ಯಾಂಕ್ ಗಳಿಸಿ ಸಾಧನೆ ಮಾಡಿದ್ದಾರೆಂದು ಕಾಲೇಜಿನ ಪ್ರಾಚಾರ್ಯ ಡಾ. ಎಂ.ಹೆಚ್. ರಘುನಾಥರೆಡ್ಡಿ ತಿಳಿಸಿದ್ದಾರೆ.

 

ಅಲ್ಲದೇ, ಮೊದಲನೆಯ ಬಿ.ಡಿ.ಎಸ್. ನಿಂದ ಅಂತಿಮ ಬಿ.ಡಿ.ಎಸ್. ವರೆಗೆ ವಿವಿಧ ವಿದ್ಯಾರ್ಥಿಗಳಿಗೆ ಬೇರೆ ಬೇರೆ ವಿಷಯಗಳಲ್ಲಿ 56 ರ್ಯಾಂಕುಗಳು ಲಭಿಸಿದ್ದು, ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ. ಕಳಸದ್ ಹಾಗೂ ಸದಸ್ಯರಾದ ಶ್ರೀ ಬಸವಕುಮಾರ ಸ್ವಾಮೀಜಿ. ಡಾ. ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್ ಹಾಗೂ ಕಾಲೇಜಿನ ಪ್ರಾಚಾರ್ಯರು ಕಾಲೇಜಿಗೆ ಕೀರ್ತಿಯನ್ನು ತಂದಿರುವ ರ್ಯಾಂಕ್ ವಿದ್ಯಾರ್ಥಿಗಳಿಗೆ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...