ಬಿಕ್ಲು ಶಿವನ ಕೊಲೆ ಪ್ರಕರಣ : ಬೈರತಿ ಬಸವರಾಜ್ ಗೆ ಜಾಮೀನು

1 Min Read

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಕೊಕೆ ಕೇಸ್ ತೀವ್ರವಾಗುತ್ತಿದ್ದಂತೆ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ನಿರಾಕರಣೆ ಮಾಡಿತ್ತು. ಬಳಿಕ ಪೊಲೀಸರು ಅರೆಸ್ಟ್ ಮಾಡಿದ್ದರು.

ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರ ಪಾತ್ರವಿದೆ ಅನ್ನೋದು ಗೊತ್ತಾದ ಕೂಡಲೇ ನಾಪತ್ತೆಯಾಗಿದ್ದರು. ಬಳಿಕ ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಸರಣಿ ಘಟನೆಗಳು ಪೂರಕವಾಗಿ ನಡೆದಿವೆ.

2 ಗುಂಪುಗಳು ಜಗಳ ಆಡುವಾಗ ಆರೋಪಿತ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಸ್ತಿಯ ಜಿಪಿಎ ತೋರಿಸಿದ್ದಾರೆ. ಬಿಕ್ಲು ಶಿವನಿಗೆ ತಾಯಿಯ ಮುಂದೆ ಗನ್ ತೋರಿಸಲಾಗಿದೆ. ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದಾಗ ಗನ್ ಹೊಂದಿರುವ ವ್ಯಕ್ತಿ ಜಗದೀಶ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಳಿಕ ಇವರು ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ. ಬೈರತಿ ಬಸವರಾಜ್ ವಿಚಾರಣೆ ಎದುರಿಸಬೇಕು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಾಗ ಹೇಗೆ ಇರಬೇಕು ಅಂತ ಗೊತ್ತಿಲ್ವಾ ಅಂತ ಕೋರ್ಟ್ ಗರಂ ಆಗಿ ಪ್ರಶ್ನಿಸಿತ್ತು. ಇದೀಗ ಷರತ್ತು ಬದ್ಧ ಜಾಮೀನು ಸಿಕ್ಕಿದೆ.

Share This Article