Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ | ಡಾ. ಮೇಘ ಜಿ. ಹೆಚ್. ಅವರಿಗೆ ವೈದ್ಯಕೀಯ ಎಐ ಪದವಿ

---Advertisement---

ಚಿತ್ರದುರ್ಗ.ಮಾ.13: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿ.ಎಂ.ಸಿ.ಆರ್.ಐ.) ಅರಿವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಮೇಘ ಜಿ. ಹೆಚ್. ಅವರು ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ AI (Artificial Intelligence) ಕೋರ್ಸ್‌ನಲ್ಲಿ ಪದವಿ ಪಡೆದು ಸಾಧನೆ ಮಾಡಿದ್ದಾರೆ.

ಡಾ. ಮೇಘ ಅವರು ಪ್ರಸ್ತುತ ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಅರಿವಳಿಕೆ ತಜ್ಞರಾಗಿ, ಅರಿವಳಿಕೆ ವಿಭಾಗದ ಮುಖ್ಯಸ್ಥರಾಗಿ ಹಾಗೂ ಎನ್.ಎಂ.ಸಿ. (NMC) ವಿಭಾಗದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಬಿಡುವಿಲ್ಲದ ವೈದ್ಯಕೀಯ ವೃತ್ತಿಯ ನಡುವೆಯೂ ಹಗಲು-ರಾತ್ರಿ ಎನ್ನದೆ ಅಧ್ಯಯನದಲ್ಲಿ ತೊಡಗಿಸಿಕೊಂಡು ಈ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕವಯಿತ್ರಿಯಾಗಿ ಪಾದಾರ್ಪಣೆ ಮಾಡಿರುವ ಇವರು, ಈಗ ತಾಂತ್ರಿಕ ಕ್ಷೇತ್ರದಲ್ಲೂ ಮಹತ್ತರ ಮೈಲಿಗಲ್ಲು ಸ್ಥಾಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now