ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಹಸುಗಳಿಗೆ ಹಸಿರು ಮೇವು ಹಾಕಿ ಹಾಲಿನ ಉತ್ಪನ್ನ ಹೆಚ್ಚಿಸಿಕೊಳ್ಳುವಂತೆ ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್ ತಿಳಿಸಿದರು.
ಹೊಳಲ್ಕೆರೆ ತಾಲ್ಲೂಕಿನ ಸಿಂಗೇನಹಳ್ಳಿಯ ಸಹಕಾರ ಸಂಘದಲ್ಲಿ ಇತ್ತೀಚೆಗೆ ನಡೆದ ಹಾಲು ಕರೆಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಹಸುಗಳಿಗೆ ಇಂಡಿ, ಬೂಸಾ ಜೊತೆಗೆ ಹಸಿರು ಮೇವು ನೀಡಿ ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಯಾವುದೇ ರೋಗಕ್ಕೆ ತುತ್ತಾಗದಂತೆ ಜಾನುವಾರುಗಳನ್ನು ಜೋಪಾನ ಮಾಡಿಕೊಳ್ಳಬೇಕು. ಕೃಷಿಯ ಜೊತೆ ರೈತರು ಹೈನುಗಾರಿಕೆ ಮೂಲಕ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕಲ್ಲದೆ ಬರಡು ರಾಸುಗಳ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನ, ಹೊಳಲ್ಕೆರೆ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಂಗಸ್ವಾಮಿ, ಕೃಷಿಕ ಸಮಾಜದ ಅಧ್ಯಕ್ಷ ಮಹೇಶ್ವರಪ್ಪ, ಪಶು ವೈದ್ಯಾಧಿಕಾರಿಗಳು ಹಾಗೂ ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸ್ಪರ್ಧೆಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












