ರೈಲ್ವೆ ಕಾಮಗಾರಿ : ಹಲವು ರೈಲುಗಳಯ ರದ್ದು, ಈ ರೈಲುಗಳ ಮಾರ್ಗ ಬದಲಾವಣೆ!

2 Min Read

ತುಮಕೂರು : ಹತ್ತಿರ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಯ ಪರಿಣಾಮವಾಗಿ, ಏಪ್ರಿಲ್ ಮೊದಲ ಮತ್ತು ಮಧ್ಯ ವಾರದಲ್ಲಿ ಸುಮಾರು 25 ರೈಲುಗಳ ಸಂಚಾರ ವ್ಯತ್ಯಯವಾಗಿದೆ.

ಕೆಲವು ಪ್ರಮುಖ ರೈಲುಗಳು ಸಂಪೂರ್ಣವಾಗಿ ರದ್ದಾಗಿದೆ. 16239/16240 ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ದೈನಂದಿನ ಎಕ್ಸ್‌ಪ್ರೆಸ್ ಮತ್ತು 12614 ಕೆಎಸ್‌ಆರ್ ಬೆಂಗಳೂರು-ಮೈಸೂರು ಒಡೆಯರ್ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳು ಏಪ್ರಿಲ್ 8 ಮತ್ತು 15, 2026 ರಂದು ಸಂಚಾರವನ್ನು ನಿಲ್ಲಿಸುತ್ತವೆ. ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು 66567 ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು 66572 ರೈಲುಗಳು ಏಪ್ರಿಲ್ 8, 2026 ರಂದು ರದ್ದಾಗಿವೆ.

ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 20652 ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ. ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ಎಕ್ಸ್‌ಪ್ರೆಸ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದೆ. ಇದು ಬೆಂಗಳೂರಿನ ಬದಲಿಗೆ ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12726 ಧಾರವಾಡ–ಕೆಎಸ್ಆರ್ ಬೆಂಗಳೂರು ಸಿದ್ದಗಂಗಾ ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದ್ದು, ಅರಸೀಕೆರೆಯಲ್ಲಿ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲುಗಳ ಮಾರ್ಗ ಬದಲಾವಣೆ

ಏಪ್ರಿಲ್ 07 ಮತ್ತು 14 ರಂದು ವಾಸ್ಕೋಡ ಗಾಮ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
ಏಪ್ರಿಲ್ 07 ಮತ್ತು 14 ರಂದು ವೇಲಂಕಣ್ಣಿಯಿಂದ ಹೊರಡುವ ರೈಲು ಸಂಖ್ಯೆ 17316 ವೇಲಂಕಣ್ಣಿ–ವಾಸ್ಕೋಡಗಾಮ ವೀಕ್ಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.
ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20676 ಮೈಸೂರು-ಬೆಳಗಾವಿ ವಿಶ್ವಮಾನವ್ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮೈಸೂರು, ಹೊಳೆನರಸೀಪುರ, ಹಾಸನ, ಅರಸೀಕೆರೆ ಮೂಲಕ ಚಲಿಸಲಿದೆ, ಪಾಂಡವಪುರದಿಂದ ತಿಪಟೂರಿನವರೆಗೆ ನಿಲುಗಡೆ ಇರುವುದಿಲ್ಲ.

Share This Article