Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಲಿಂಡರ್ ಪೂರೈಕೆ : ಕೇಂದ್ರ ಸರ್ಕಾರದ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬಾಗಲಕೋಟೆ :ಮಾರ್ಚ್ -14: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದರು.

ಅವರು ಇಂದು ಬಾಗಲಕೋಟೆಯ ನವನಗರ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆ: ಸಂತ್ರಸ್ತರಿಗೆ ಪರಿಹಾರ ಚೆಕ್ :
ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಮೀಸಲಿಟ್ಟಿಲ್ಲ ಎಂದು ವಿಪಕ್ಷ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗುತ್ತಿದ್ದು, ಸಂತ್ರಸ್ತರೆಲ್ಲರಿಗೂ ಮೂರು ನಾಲ್ಕುರ್ಷಗಳ ಅವಧಿಯಲ್ಲಿ ವಿತರಣೆ ಮಾಡಲಾಗುವುದು ಎಂದರು.

ಇ ಸ್ವತ್ತು: ಕೂಡಲೇ ಸರಿಪಡಿಸಲಾಗುವುದು :

ಇ ಸ್ವತ್ತು ರಾಜ್ಯದಲ್ಲಿ ಸಮಸ್ಯೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದನ್ನು ಕೂಡಲೇ ಸರಿಪಡಿಸಲಾಗುವುದು ಎಂದರು.

ಬಿಜೆಪಿ ವೈದ್ಯಕೀಯ ಕಾಲೇಜು ಏಕೆ ಸ್ಥಾಪಿಸಲಿಲ್ಲ :

ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಸಮಾರಂಭ ಹಾಗೂ ಛತ್ರಪತಿ ಶಿವಾಜಿ ಹಾಗೂ ಬಸವಣ್ಣ ಅವರ ಮೂರ್ತಿಗೆ ತಲಾ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸೂಚಿಸಿರುವುದು ಚುನಾವಣಾ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ.. ಇದು ಗಿಮಿಕ್ ಹೇಗಾಗುತ್ತದೆ ಎಂದರು. ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದರು.

ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ : ಹೈ ಕಮಾಂಡ್ ತೀರ್ಮಾನ

ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಹೆಚ್.ವೈ ಮೇಟಿ ಕುಟುಂಬದವರನ್ನೇ ಆಯ್ಕೆ ಮಾಡಲಾಗುವುದೇ ಎಂಬ ಮಾಧ್ಯಮಗಳ ಉತ್ತರ ನೀಡಿ ಅವರೂ ಒಬ್ಬ ಆಕಾಂಕ್ಷಿ ಎಂದರು.

ವಾರದೊಳಗೆ ಉಪಚುನಾವಣೆ ಘೋಷಣೆಯಾಗಬಹುದು :

ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು ಎಂದರು. ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈ ಕಮಾಂಡ್ ಟಿಕೆಟ್ ನೀಡುವುದು ಎಂದರು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ ಎಂದರು.

ಸಿಲಿಂಡರ್ ಪೂರೈಕೆ : ಕೇಂದ್ರ ಸರ್ಕಾರದ ಜವಾಬ್ದಾರಿ

ಸಿಲಿಂಡರ್ ಸರಬರಾಜು ಸುಗಮಗೊಳಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಕೊಟ್ಟರೆ ವಿತರಣೆ ಮಾಡುತ್ತದೆ. ಆಹಾರ ಸಚಿವರು ಎರಡು ಸಭೆಗಳನ್ನು ಈಗಾಗಲೇ ನಡೆಸಿದ್ದು, ಕೇಂದ್ರ ಸಚಿವರಿಗೆ ಪಾತ್ರವನ್ನೂ ಬರೆಯಲಾಗಿದೆ. ಸಿಲಿಂಡರ್ ಅಭಾವವಾಗದಂತೆ ಎಚ್ಚರಿಕೆ ವಹಿಸಲು ಕೋರಲಾಗಿದೆ.

ಒಳಮೀಸಲಾತಿ: ಮಾರ್ಚ್ 27 ರಂದು ಸಭೆ :
ಒಳಮೀಸಲಾತಿ ಕುರಿತು ಮಾರ್ಚ್ 27 ರಂದು ಸಭೆ ಕರೆಯಲಾಗಿದೆ. ಅಂದು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...