Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೃಷ್ಣಾ ಮೇಲ್ದಂಡೆ ಹಾಗೂ ತುಂಗಾಭದ್ರ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು : ಡಿಕೆಶಿ ಕೆಂಡಾಮಂಡಲ

---Advertisement---

ಬೆಂಗಳೂರು: ನೀರಾವರಿ ಯೋಜನೆಗೆ ನೆರೆರಾಜ್ಯಗಳ ಅಡ್ಡಗಾಲು ಇದ್ದೆ ಇರುತ್ತದೆ, ಕ್ಯಾತೆ ತೆಗೆಯುತ್ತಲೇ ಇರುತ್ತವೆ. ಇದೀಗ ಕೃಷ್ಣಾ‌ ಮೇಲ್ದಂಡೆ ಹಾಗೂ ತುಂಗಾಭದ್ರ ನೀರಾವರಿ ಯೋಜನೆಗೆ ಅಡ್ಡಗಾಲು ಹಾಕಿದ್ದ, ಆಂಧ್ರ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಆಂಧ್ರ ಸರ್ಕಾರ ಒಡ್ಡುತ್ತಿರುವ ಅಡ್ಡಿಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ‌ ಪರಿಗಣಿಸಿದ್ದು, ನೆರೆಯ ರಾಜ್ಯದ ತಗಾದೆಗೆ ತಿರುಗೇಟು ನೀಡುವುದಕ್ಕೆ ಮುಂದಾಗಿದೆ.

ಈ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದು, ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧರಿಸಿದೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ ಮೂರನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲಾಗುವುದು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಮುಂಬರುವ ಮಂಗಳವಾರ ಸಭೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!