ದಾವಣಗೆರೆ : ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದ್ದ ದಾವಣಗೆರೆ ಹನಿ ಟ್ರ್ಯಾಪ್ (Honey Trap ) ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕೆದೆ. ಆರಂಭದಲ್ಲಿ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಡಿ ಬಂಧಿತರಾಗಿದ್ದ ನರ್ಸ್ ಸೇರಿದಂತೆ ನಾಲ್ವರು, ಇದೀಗ ತಮ್ಮನ್ನು ಪ್ರಭಾವಿ ವ್ಯಕ್ತಿಗಳು ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ದಾವಣಗೆರೆಯ ಪ್ರತಿಷ್ಠಿತ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ ಅವರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಹನಿಟ್ರ್ಯಾಪ್ ಜಾಲವನ್ನು ದಾವಣಗೆರೆ ಪೊಲೀಸರು ಪತ್ತೆಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರು ಮಹಿಳಾ ನರ್ಸ್ ಹಾಗೂ ಚನ್ನಬಸಪ್ಪ ಸೇರಿದಂತೆ ಮೂವರು ಪುರುಷರನ್ನು ಬಂಧಿಸಲಾಗಿತ್ತು.
ದಾಖಲಾಗಿದ್ದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬಲೆ ಬೀಸಿ ನರ್ಸ್ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಆರೋಪಿಗಳು ಇದರಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡ ಇದೆ ಎಂದು ಹೇಳಿದ್ದಾರೆ.
ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹನಿಟ್ರ್ಯಾಪ್ ಮಾಡಿಲ್ಲ. ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು ಎಂದಿದ್ದಾರೆ.
ನಮ್ಮ ಮೇಲಿನ ಹಳೆಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಅಧಿಕಾರಿಯೊಬ್ಬರು ಈ ಕೃತ್ಯಕ್ಕೆ ಸಾಥ್ ನೀಡಿದ್ದಾರೆ. ಹನಿಟ್ರ್ಯಾಪ್ ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದುಇದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















