ಸುದ್ದಿಒನ್, ಬಾಗಲಕೋಟೆ, ಮಾರ್ಚ್. 15 : ಒಳಮೀಸಲಾತಿ ವಿಚಾರದಲ್ಲಿ ಮಾ.27 ರಂದು ನಡೆಯುವ ಸಂಪುಟ ಸಭೆಯಲ್ಲಿ ಎಲ್ಲರಿಗೂ ಸಮಾಧಾನ ಆಗುವ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗೆ ಭರವಸೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ ಕಾರ್ಯಕ್ರಮದ ನಂತರ ನವನಗರದಲ್ಲಿ ಭೋವಿ ಗುರುಪೀಠಕ್ಕೆ ಸಿಎಂ ಭೇಟಿ ನೀಡಿ, ಸ್ವಾಮೀಜಿ ಅವರೊಂದಿಗೆ ಕೆಲಹೊತ್ತು ಚರ್ಚಿಸಿದ್ದಾರೆ.ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ, ಯಾವುದೇ ಲೋಪ ಆಗದಂತೆ ನೋಡಿಕೊಳ್ಳುತ್ತೇವೆ. ಉದ್ಯೋಗ ಭರ್ತಿ ಮಾಡಿಕೊಳ್ಳಬೇಕಾಗಿರುವುದರಿಂದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











