ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 15 : ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 150 ಎ. ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಮೃತಪಟ್ಟಿರುವುದು ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಮರೇಶ ಮತ್ತು ಸಚೀನ್ ಮೃತರಾಗಿದ್ದಾರೆ. ನಿರಂತರ ಅಭ್ಯಾಸ, ಕಠಿಣ ಪರಿಶ್ರಮದಿಂದ ಕನಸು ಹೊತ್ತು ಇತ್ತಿಚಗೆ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು.
ಈ ದುರ್ಘಟನೆಯಿಂದ ಪೊಲೀಸ್ ಇಲಾಖೆಗೆ ಮತ್ತು ಅವರ ಕುಟುಂಬವರ್ಗದವರಿಗೆ ತುಂಬಲಾರದ ನಷ್ಟವನ್ನುಂಟಾಗಿದೆ ಎಂದರು.
ನಂತರ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ಬೇಟಿನೀಡಿ ಮೃತರ ದುಃಖತಪ್ತ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದ್ದು, ಭಗವಂತನು ಮೃತರ ಆತ್ಮಕ್ಕೆ ಚಿರ ಶಾಂತಿ ಕರುಣಿಸಲಿ. ದುಃಖತಪ್ತ ಕುಟುಂಬದವರಿಗೆ ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ ಎಂದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಪಿಎಸ್‌ಐ ಈಶ್ವರ್ ಮತ್ತು ಆರ್‌ಎಸ್‌ಐ ಮಹಾಂತೇಶ್ ಬೊಮ್ಮನ್ನವರ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಿ ಆರೋಗ್ಯವನ್ನು ಚೇತರಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮೃತ ಕುಟುಂಬಗಳಿಗೆ ನಿಯಮನುಸಾರ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಸಮಯದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಿಲ್ಲಾ ಎಸ್ಪಿ ರಂಜೀತ್ ಕುಮಾರ್ ಬಂಡಾರು, ಎಎಸ್ಪಿ ಶಿವಕುಮಾರ್ ಸೇರಿದಂತೆ ಪೋಲೀಸ್ ಅಧಿಕಾರಿಗಳು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












