ಬೆಂಗಳೂರು: ಬಜೆಟ್ ಮೇಲಿನ ಅಧಿವೇಶನ ನಡೆಯುತ್ತಿದ್ದು, ಸರಿಯಾದ ಸಮಯಕ್ಕೆ ಸಚಿವರು ಹಾಜರಾಗದೆ ಇರುವುದು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತಿಯಲ್ಲಿರುವುದನ್ನು ಗಮನಸಿದ ಸ್ಪೀಕರ್ ಕೋಪಗೊಂಡಿದ್ದಾರೆ. 230ರ ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಮಾತ್ರ ಸಚಿವರು ಉತ್ತರಿಸಿದ್ದಾರೆ. ಕಲಾಪ ನಡೆಸೋದು ಮಂತ್ರಿಗಳಿಗಾಗಿ ಅಲ್ಲ, ಎಲ್ಲಾ ಶಾಸಕರ ಸಮಸ್ಯೆಗಳಿಗಾಗಿ. ಎಲ್ಲಾ ಪಕ್ಷಗಳ ಶಾಸಕರೂ ಪ್ರಶ್ನೆಗಳನ್ನ ಕೇಳುತ್ತಾರೆ. ನಿಯಮಾವಳಿ ಪ್ರಕಾರ ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಲಿಲ್ಲ ಅಂದ್ರೆ ಹೇಗೆ..? ಹಾಗಾದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು ಹೇಳಿ ಎಂದು ಗರಂ ಆದಂತ ಸ್ಪೀಕರ್ ಎದ್ದು ಹೋಗಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್ ಯುಟಿ ಖಾದರ್ ಅವರ ಮನವೊಲಿಸಿದ್ದಾರೆ. ಬಳಿಕ ಕಲಾಪವೂ ಮತ್ತೆ ಆರಂಭಗೊಂಡಿದೆ. ಇದರ ನಡುವೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಕಂದಾಯ ಇಲಾಖೆ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಷ್ಟೇ ಅಲ್ಲ ಸಮರ್ಪಕವಾಗಿ ಉತ್ತರ ಕೊಡದ ಮೂರ್ನಾಲ್ಕು ಇಲಾಖೆ ಕಾರ್ಯದರ್ಶಿಗಳಿಗೆ ನೋಟೀಸ್ ಕೂಡ ಜಾರಿ ಮಾಡುವಂತೆ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲಾ ಶಾಸಕರಿಗೆ ಉತ್ತರ ಸಿಗಬೇಕು. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕರೆಲ್ಲರೂ ಸೇರಿ ಚರ್ಚಿಸಿದ್ದೇವೆ. ಎಲ್ಲರಿಗೂ ಉತ್ತರ ಸಿಗುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಡ್ಡಾಯ ಹಾಜರಾತಿ ಎಂದು ಹೇಳಿದರು ಸಹ ಸಚಿವರು ಸದನಕ್ಕೆ ಬಂದಿಲ್ಲ. ಅಧಿಕಾರಿಗಳು ಇಲ್ಲ. ಹೀಗಾದ್ರೆ ಹೇಗೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















