Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸ್ಟೇಡಿಯಂ ಬಳಿ ಕೊಲೆ ; ಆರೋಪಿ ಬಂಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 16 : ನಗರದ ಸ್ಟೇಡಿಯಂ ಮುಂಭಾಗದ ಬುದ್ಧ ಸರ್ಕಲ್ ನಲ್ಲಿ ನಿನ್ನೆ ರಾತ್ರಿ (ಮಾರ್ಚ್. 15, ಭಾನುವಾರ) ಜೋಗಿಮಟ್ಟಿ ರಸ್ತೆ ವಾಸಿ ತಾಜ್‌ಪೀರ್ ನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಚಿತ್ರದುರ್ಗ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದ ಹೊರವಲಯದ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಹಿಂಭಾಗ ಗುಡ್ಡದ ಪ್ರದೇಶದಲ್ಲಿ ಮರೆಮಾಚಿಕೊಂಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಪತ್ತೆ ಮಾಡಿ ವಿಚಾರಿಸಿದಾಗ, ತನ್ನ ಹೆಂಡತಿ ಶಬಾನಾಳನ್ನು ಪ್ರೀತಿಸಿ ಮದುವೆಯಾಗಿರುತ್ತೇನೆ. ಆದರೆ ಆಕೆಯ ತವರು ಮನೆಯವರು ಹಾಗೂ ಆಕೆಯ ಮಾವನಾದ ತಾಜ್ ಪೀರ್ ನಾನು ಮತ್ತು ನನ್ನ ಹೆಂಡತಿ ಶಬಾನಾಳಿಗೆ ಸಂಸಾರ ಮಾಡಲು ತೊಂದರೆ ಕೊಡುತ್ತಿದ್ದ ಎನ್ನುವ ಕಾರಣಕ್ಕಾಗಿ ದ್ವೇಷದಿಂದ ತಾಜ್ ಪೀರ್ ನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವುದಾಗಿ ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಶ್ಲಾಘಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...