Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೀಘ್ರವೇ ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳ: ಡಾ. ಸುಧಾಕರ್

---Advertisement---

ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವು ವರ್ಷಗಳಿಂದ ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಆಗಿಲ್ಲ ಎಂದು ಹೇಳಿದ್ದಾರೆ. ಇತರೆ ರಾಜ್ಯಗಳೊಂದಿಗೆ ಹೋಲಿಸಿದರೆ ಅಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚು ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಶುಲ್ಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದರು.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಆರು ಸದಸ್ಯರ ಸಮಿತಿಯನ್ನು ರಚಿಸಿದ್ದು, ಸಮಿತಿಯ ವರದಿ ಬಂದ ಬಳಿಕ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ. ಇದೇ ಶೈಕ್ಷಣಿಕ ವರ್ಷದಲ್ಲೇ ಈ ಕ್ರಮ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆ ಎಂದು ಸಚಿವರು ತಿಳಿಸಿದರು.ಇದೇ ವೇಳೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಜಾರಿಗೆ ತಂದಿರುವ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಉತ್ತಮ ವ್ಯವಸ್ಥೆಯಾಗಿದೆ ಎಂದರು. ಕೋವಿಡ್ ಅವಧಿಯಲ್ಲಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿಭಿನ್ನ ವ್ಯವಸ್ಥೆಗಳು ಇದ್ದ ಕಾರಣ 2021ರಲ್ಲಿ UUCMS ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಈಗಾಗಲೇ ಮುಂದಿನ ಐದು ವರ್ಷಗಳಿಗಾಗಿ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಎಲ್ಲಾ ವಿಶ್ವವಿದ್ಯಾಲಯಗಳು ಇದೇ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ UUCMS 2.0 ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದರ ಮೂಲಕ ಡೀಮ್ಡ್ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳನ್ನೂ ಏಕರೂಪದ ವೇಳಾಪಟ್ಟಿಗೆ ತರಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯಪಾಲರ ನೇತೃತ್ವದಲ್ಲಿ ವಿಸಿಗಳ ಸಮ್ಮೇಳನ ನಡೆಸಿ ಈ ವಿಷಯಗಳ ಕುರಿತು ಸಮಗ್ರ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ SSC ಹುದ್ದೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ದೊರಕಲು ಹೊಸ ಪಠ್ಯಕ್ರಮ ರೂಪಿಸಲು ಸಮಿತಿ ರಚನೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಜೊತೆಗೆ UUCMS ವ್ಯವಸ್ಥೆಯಲ್ಲಿ ಶಾಸಕರು ಮತ್ತು ಸದಸ್ಯರನ್ನೂ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now