Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೋನಿಯಾ ಗಾಂಧಿಗೆ ಪತ್ರ ಬರೆದ ಎಚ್‌ಡಿ ದೇವೇಗೌಡ!ಪತ್ರದಲ್ಲೇನಿದೆ?

---Advertisement---

ಸುದ್ದಿಒನ್, ನವದೆಹಲಿ : ಸಂಸತ್ ಅಧಿವೇಶನದ ವೇಳೆ ವಿಪಕ್ಷಗಳಿಂದ, ವಿಶೇಷವಾಗಿ ಕಾಂಗ್ರೆಸ್ ಸದಸ್ಯರಿಂದ ನಡೆಯುತ್ತಿರುವ ಅಡ್ಡಿಪಡಿಸುವ ಕ್ರಮಗಳ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯ ಹೆಚ್ ಡಿ ದೇವೆಗೌಡ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಅವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬಜೆಟ್ ಅಧಿವೇಶನದ ಅವಧಿಯಲ್ಲಿ ಪ್ರತಿಪಕ್ಷ ಸದಸ್ಯರು ನಿರಂತರವಾಗಿ ಘೋಷಣೆ ಕೂಗುವುದು, ಫಲಕ ಪ್ರದರ್ಶನ, ಧರಣಿ ನಡೆಸುವುದು ಸೇರಿದಂತೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಈ ರೀತಿಯ ನಡೆ ಸಂಸತ್ತಿನ ಘನತೆ ಕುಗ್ಗಿಸುವುದರೊಂದಿಗೆ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕನ ಹೊಣೆಗಾರಿಕೆ ಸುಲಭವಲ್ಲ ಎಂಬುದನ್ನು ಒಪ್ಪಿಕೊಂಡಿರುವ ಅವರು, ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಅಗತ್ಯವಾದರೂ, ಪ್ರತಿಭಟನೆಗೆ ಸಹ ನಿಯಮ-ನೀತಿಗಳಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಪೀಠಕ್ಕೆ ಅಗೌರವ ತೋರುವ, ಸಂಸದೀಯ ನಿಯಮಗಳನ್ನು ಮೀರುವ ರೀತಿಯ ನಡೆಗಳು ಅಸಂಗತವಾಗಿವೆ ಎಂದು ಹೇಳಿದ್ದಾರೆ.

ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಬಿಸ್ಕತ್ತು, ಪಕೋಡಾ ಸೇವಿಸುವುದು ಸೇರಿದಂತೆ ಕೆಲ ಅತಿರೇಕದ ಕ್ರಮಗಳನ್ನು ಅವರು ಟೀಕಿಸಿ, ಇವು ಸಂಸದೀಯ ಸಂಸ್ಕೃತಿಗೆ ವಿರುದ್ಧ ಎಂದು ಹೇಳಿದ್ದಾರೆ. ಹಿಂದಿನ ಕಾಲದಲ್ಲಿ ವಿರೋಧ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಸಂಯಮದಿಂದ ವರ್ತಿಸಿದ್ದವು ಎಂದು ಅವರು ನೆನಪಿಸಿದರು.

ತಮ್ಮ 65 ವರ್ಷಗಳ ಸಾರ್ವಜನಿಕ ಜೀವನದ ಅನುಭವವನ್ನು ಉಲ್ಲೇಖಿಸಿರುವ ದೇವೇಗೌಡರು, ತಮ್ಮ ರಾಜಕೀಯ ಜೀವನದ ಬಹುಪಾಲು ಅವಧಿಯನ್ನು ಪ್ರತಿಪಕ್ಷದಲ್ಲಿಯೇ ಕಳೆದಿದ್ದಾಗಿ ಹೇಳಿ, ವಿರೋಧ ವ್ಯಕ್ತಪಡಿಸುವ ಹಕ್ಕು ಇದ್ದರೂ ಅದು ಸಂಪ್ರದಾಯ, ನಿಯಮ ಮತ್ತು ಘನತೆಗೆ ಧಕ್ಕೆಯಾಗದ ರೀತಿಯಲ್ಲಿ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಪಕ್ಷ ಸದಸ್ಯರ ವರ್ತನೆ ನಿರಾಶೆ ತಂದಿದೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ ಸದಸ್ಯರು ತಮ್ಮ ನಡವಳಿಕೆಯನ್ನು ಸರಿಪಡಿಸಿ ಸಂಸದೀಯ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಜವಹರಲಾಲ ನೆಹರು, ಸರ್ದಾರ ವಲ್ಲಭಾಯಿ ಪಟೇಲ, ಅಂಬೇಡ್ಕರ್ ಮುಂತಾದ ನಾಯಕರು ಸ್ಥಾಪಿಸಿದ ಸಂಸದೀಯ ಪರಂಪರೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಒತ್ತಿಹೇಳಿದ್ದಾರೆ.

ತಮ್ಮ ದೀರ್ಘ ಸಂಸದೀಯ ಅನುಭವದಲ್ಲಿ ಇತ್ತೀಚಿನಂತಹ ಅಡಚಣೆ ಮತ್ತು ಅವ್ಯವಸ್ಥೆಯನ್ನು ಕಂಡಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಸಂಸತ್ತಿನ ಒಳಗೆ ಪ್ರಚೋದನಾತ್ಮಕವಾಗಿ ವರ್ತಿಸುವುದು, ಸದನದ ಬಾವಿಗೆ ಇಳಿದು ಘೋಷಣೆ ಕೂಗುವುದು ತಮ್ಮ ರಾಜಕೀಯ ಜೀವನದಲ್ಲಿ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now