Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೆಡ್ ಕ್ರಾಸ್ ಚಿತ್ರದುರ್ಗ ಶಾಖೆಗೆ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ

---Advertisement---

ಚಿತ್ರದುರ್ಗ. ಮಾ.18: ಜೀವ ಉಳಿಸುವ ಮಾನವೀಯ ಸೇವೆ ಮತ್ತು ರಕ್ತದಾನ ಅಭಿಯಾನದಲ್ಲಿ ತೋರಿದ ಗಮನಾರ್ಹ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ ದೊರೆತಿದೆ.

 

ಬೆಂಗಳೂರಿನ ಗಾಂಧಿ ಭವನದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಫೋರಮ್ ಆಫ್ ಆರ್ಟಿಸ್ಟ್ಸ್ ಅಂಡ್ ಆಕ್ಟಿವಿಸ್ಟ್ಸ್ (ಎನ್‍ಐಎಫ್‍ಎಎ) ವತಿಯಿಂದ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ‘ಸಂವೇದನಾ–2 ರಕ್ತದಾನ ಪ್ರಶಸ್ತಿ ಸಮಾರಂಭ’ದಲ್ಲಿ ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ ಹಾಗೂ ನಿರ್ದೇಶಕ ಎಸ್.ವಿ. ಗುರುಮೂರ್ತಿ ಅವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.

 

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಡಾ. ಸಿ.ಆರ್. ಚಂದ್ರಶೇಖರ್, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಗೋವಿಂದಪ್ಪ, ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಎನ್‍ಐಎಂಎ ರಾಜ್ಯಾಧ್ಯಕ್ಷ ಡಾ. ಸಿದ್ಧಪ್ಪ, ಬಿಎಸ್‍ಎಫ್‍ನ ಡಾ. ಗುರುಮೂರ್ತಿ, ಬೆಂಗಳೂರು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎ.ಬಿ. ಶೆಟ್ಟಿ ಹಾಗೂ ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್‍ನ ಪ್ರಧಾನ ಕಾರ್ಯದರ್ಶಿ ಅಂಬಾಸಿಡರ್ ಡಾ. ನೀಲಿಮಾ ಉಪಸ್ಥಿತರಿದ್ದರು. ಎನ್‍ಐಎಫ್‍ಎಎ ರಾಷ್ಟ್ರೀಯ ಅಧ್ಯಕ್ಷೆ ಡಾ. ಅಶ್ವಿನಿ ಎಸ್. ಶೆಟ್ಟಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now