Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್.30 ರಂದು ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ

---Advertisement---

 

ಸುದ್ದಿಒನ್, ಮಾ.18: ಹಿರಿಯೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪುಣ್ಯಕ್ಷೇತ್ರ ವದ್ದೀಕೆರೆಯ ಶ್ರೀ ಕಾಲಭೈರವೇಶ್ವರಸ್ವಾಮಿ ಯಾನೆ ಶ್ರೀ ಸಿದ್ಧೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಅದ್ದೂರಿಯಾಗಿ ಜರುಗಲಿದೆ. ಪವಿತ್ರ ಕ್ಷೇತ್ರ ವದ್ದೀಕೆರೆಯಲ್ಲಿ ನೆಲೆಸಿರುವ ಭಕ್ತರ ಆರಾಧ್ಯ ದೈವ ಶ್ರೀ ಕಾಲಭೈರವೇಶ್ವರಸ್ವಾಮಿಯ ಕಲ್ಯಾಣೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

 

ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 27ರ ಶುಕ್ರವಾರ ರಾತ್ರಿ 8-00 ಗಂಟೆಗೆ ಕಂಕಣಧಾರಣೆಯೊAದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಮಾರ್ಚ್ 28ರ ಶನಿವಾರ ರಾತ್ರಿ 7-00 ಗಂಟೆಗೆ ಭಕ್ತಿಪೂರ್ವಕವಾಗಿ ಅಗ್ನಿಕುಂಡೋತ್ಸವ ನಡೆಯಲಿದ್ದು, ಮಾರ್ಚ್ 29ರ ಭಾನುವಾರ ರಾತ್ರಿ 8-00 ಗಂಟೆಗೆ ಚಿಕ್ಕ ರಥೋತ್ಸವ ಜರುಗಲಿದೆ.

 

ಜಾತ್ರೆಯ ಪ್ರಮುಖ ಆಕರ್ಷಣೆಯಾದ ಬ್ರಹ್ಮರಥೋತ್ಸವವು ಮಾರ್ಚ್ 30ರ ಸೋಮವಾರ ಸಂಜೆ 4-30 ಗಂಟೆಗೆ ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಮಧ್ಯಾಹ್ನ 3-30ಕ್ಕೆ ಹೂವಿನ ಪಲ್ಲಕ್ಕಿ ಉತ್ಸವ (ಅಡ್ಡ ಪಲ್ಲಕ್ಕಿ ಉತ್ಸವ) ನಡೆಯಲಿದ್ದು, ಜಾನಪದ ಕಲಾತಂಡಗಳ ವಿವಿಧ ಮೇಳಗಳೊಂದಿಗೆ ರಥೋತ್ಸವಕ್ಕೆ ವಿಶೇಷ ಕಳೆ ಬರಲಿದೆ. ತದನಂತರ ಮಾರ್ಚ್ 31ರ ಮಂಗಳವಾರ ಉಂಡೆ, ಮಂಡೆ ಮತ್ತು ಸಿದ್ಧಭುಕ್ತಿ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 1ರ ಬುಧವಾರ ಕಿರುಬಾಣ, ವಸಂತೋತ್ಸವ ಹಾಗೂ ಸಂಜೆ 6-00 ಗಂಟೆಗೆ ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವವು ಸಂಪನ್ನಗೊಳ್ಳಲಿದೆ.

 

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಹಾಗೂ ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=============

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now