ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಮಾ. 18 : ಜಿಲ್ಲಾ ಲಿಂಗಾಯತ ಶಿವಶಿಂಪಿ ಚಿತ್ರದುರ್ಗ ಮಹಿಳಾ ಘಟಕದವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಶಿವಶಿಂಪಿ ಮಹಿಳಾ ಸಂಭ್ರಮವನ್ನು ಮಾ. 24 ಮಂಗಳವಾರ ನಗರದ ಎಸ್.ಆರ್.ಬಿ.ಎಂ.ಎಸ್. ರೋಟರಿ ಬಾಲಭವನ ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಲಿಂಗಾಯತ ಶಿವಶಿಂಪಿ ಚಿತ್ರದುರ್ಗ ಮಹಿಳಾ ಘಟಕದ ಖಂಜಾಚಿ ನಿರ್ಮಲ ಬಸವರಾಜು ತಿಳಿಸಿದ್ದಾರೆ.
ವಿಶ್ವ ಮಹಿಳಾ ದಿನಾಚರಣೆ ಶಿವಶಿಂಪಿ ಮಹಿಳಾ ಸಂಭ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಲಿಂಗಾಯತ ಶಿವಶಿಂಪಿ ಚಿತ್ರದುರ್ಗ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಇಂದಿರಾ ಜಯದೇವಮೂರ್ತಿ ವಹಿಸಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷರು, ಉಪನ್ಯಾಸಕರಾದ ಶ್ರೀಮತಿ ನಿರ್ಮಲ ಮರಡಿಹಳ್ಳಿ ಭಾಗವಹಿಸಲಿದ್ದು, ‘ಇಂದಿನ ಮಹಿಳೆಯರ ಶಿಕ್ಷಣ ಮತ್ತು ಜೀವನ’ದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸಾಗರದ ಭರತನಾಟ್ಯ ಕಲಾವಿದೆ ಕುಮಾರಿ ಎಸ್.ಎಂ. ಚಂದನರವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲಾ ಲಿಂಗಾಯತ ಶಿವಶಿಂಪಿ ಚಿತ್ರದುರ್ಗ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀಮತಿ ಶೈಲ ವಿಜಯಕುಮಾರ್ ಭಾಗವಹಿಸಲಿದ್ದಾರೆ. ಸಮಾರಂಭದ ನಂತರ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















