Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆನ್‌ಲೈನ್ ಹಣದ ಆಟಗಳಿಗೆ ನಿಷೇಧ: 2025ರ ಗೇಮಿಂಗ್ ಕಾಯ್ದೆ ಜಾರಿ

---Advertisement---

ದೇಶದಲ್ಲಿ ಸುರಕ್ಷಿತ ಹಾಗೂ ಜವಾಬ್ದಾರಿಯುತ ಡಿಜಿಟಲ್ ಗೇಮಿಂಗ್ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ–2025’ ಅನ್ನು ಜಾರಿಗೊಳಿಸಿದೆ. ಈ ಕಾಯ್ದೆಯಡಿ ಎಲ್ಲಾ ರೀತಿಯ ಆನ್‌ಲೈನ್ ಹಣದ ಆಟಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಲೋಕಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ ರಾಜ್ಯ ಸಚಿವ ಡಾ. ಎಲ್. ಮುರುಗನ್ಈ ಕಾಯ್ದೆಯ ಉದ್ದೇಶ ಸುರಕ್ಷಿತ ಗೇಮಿಂಗ್ ಪರಿಸರ ನಿರ್ಮಾಣವಾಗಿದ್ದು, ಇ-ಸ್ಪೋರ್ಟ್ಸ್ ಹಾಗೂ ಸಾಮಾಜಿಕ ಆನ್‌ಲೈನ್ ಆಟಗಳಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹಣದ ಆಟಗಳಿಗೆ ಸಂಪೂರ್ಣ ನಿಷೇಧ
ಹೊಸ ಕಾಯ್ದೆಯ ಪ್ರಕಾರ, ಅವಕಾಶದ ಆಟಗಳು, ಕೌಶಲ್ಯದ ಆಟಗಳು ಅಥವಾ ಇವೆರಡರ ಸಂಯೋಜನೆಯಾಗಿರುವ ಯಾವುದೇ ಆನ್‌ಲೈನ್ ಹಣದ ಆಟಗಳನ್ನು ನಿಷೇಧಿಸಲಾಗಿದೆ. ಇಂತಹ ಆಟಗಳ ಜಾಹೀರಾತು, ಪ್ರಚಾರ ಹಾಗೂ ಬ್ಯಾಂಕ್‌ಗಳ ಮೂಲಕ ಹಣಕಾಸು ವ್ಯವಹಾರ ನಡೆಸುವುದಕ್ಕೂ ಕಟ್ಟುನಿಟ್ಟಿನ ತಡೆ ವಿಧಿಸಲಾಗಿದೆ.

ಕಠಿಣ ಶಿಕ್ಷೆಗಳ ವಿಧಿ
ಕಾಯ್ದೆ ಉಲ್ಲಂಘಿಸಿದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಅಥವಾ ಒಂದು ಕೋಟಿ ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ಪುನರಾವರ್ತಿತ ಅಪರಾಧಗಳಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಎರಡು ಕೋಟಿ ರೂಪಾಯಿವರೆಗೆ ದಂಡ ವಿಧಿಸುವ ಪ್ರಾವಧಾನವಿದೆ.ಇದೇ ವೇಳೆ, ಇಂತಹ ಆಟಗಳ ಜಾಹೀರಾತು ನೀಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಆನ್‌ಲೈನ್ ಗೇಮಿಂಗ್ ಪ್ರಾಧಿಕಾರ ಸ್ಥಾಪನೆ
ಕಾಯ್ದೆಯಡಿ “ಭಾರತೀಯ ಆನ್‌ಲೈನ್ ಗೇಮಿಂಗ್ ಪ್ರಾಧಿಕಾರ” ಸ್ಥಾಪನೆಗೂ ಅವಕಾಶ ಕಲ್ಪಿಸಲಾಗಿದ್ದು, ಅನುಮತಿಸಬಹುದಾದ ಆಟಗಳ ವರ್ಗೀಕರಣ, ನೋಂದಣಿ, ಮೇಲ್ವಿಚಾರಣೆ ಹಾಗೂ ಸಾರ್ವಜನಿಕ ಕುಂದುಕೊರತೆ ಪರಿಹಾರ ಇದರ ಜವಾಬ್ದಾರಿಯಾಗಿರಲಿದೆ.

ಡ್ರಾಫ್ಟ್ ನಿಯಮಗಳಿಗೆ ಸಾರ್ವಜನಿಕ ಅಭಿಪ್ರಾಯ ಆಹ್ವಾನ
ಕಾಯ್ದೆಯನ್ನು ಕಾರ್ಯರೂಪಕ್ಕೆ ತರಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ 2025ರ ಅಕ್ಟೋಬರ್ 2ರಂದು ಕರಡು ನಿಯಮಗಳನ್ನು ಪ್ರಕಟಿಸಿದ್ದು, ಭಾಗೀದಾರರು ಮತ್ತು ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿದೆ.
ಒಟ್ಟಾರೆ, ಈ ಕಾಯ್ದೆ ಮೂಲಕ ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ನಿಯಂತ್ರಣದಲ್ಲಿಟ್ಟುಕೊಂಡು, ಗ್ರಾಹಕರ ರಕ್ಷಣೆ ಹಾಗೂ ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ ಡಿಜಿಟಲ್ ವಾತಾವರಣವನ್ನು ಬಲಪಡಿಸುವ ಗುರಿ ಹೊಂದಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now