Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ-ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

---Advertisement---

ಬೆಂಗಳೂರು: ದಾವಣಗೆರೆ – ಬಾಗಲಕೋಟೆ ಕ್ಷೇತ್ರದಲ್ಲಿ ಏಪ್ರಿಲ್ 9ಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿಯೇ ಇದ್ದರು. ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೊಸ ವ್ಯಕ್ತಿಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ಹೆಚ್ ವೈ ಮೇಟಿ ನಿಧನದ ಬಳಿಕ ಆ ಕ್ಷೇತ್ರ ಖಾಲಿ ಉಳಿದಿತ್ತು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚರಂತಿಮಠ್ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಘೋಷಣೆ ಮಾಡಿದೆ‌. ಚರಂತಿಮಠ್ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಾಗಿರುವ ಕಾರಣ ಬಿಜೆಪಿ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯವೇ ಹೆಚ್ಚಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಆಡಳಿತವೇ ಇತ್ತು. ಅವರ ನಿಧನದ ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶ್ರೀನಿವಾಸ್ ಟಿ.ದಾಸರಿಯಲ್ಲ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇಲ್ಲಿ ಬಿಜೆಪಿ ವಾಲ್ಮೀಕಿ ಸಮುದಾಯಕ್ಕೆ ಆದ್ಯತೆಯನ್ನು ಕೊಟ್ಟಿದೆ. ಎಸ್ಟಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ಈ ತೀರ್ಮಾನವನ್ನ ಮಾಡಿದೆ. ಎರಡು ಕ್ಷೇತ್ರದಲ್ಲೂ ಈ ಬಾರಿ ಗೆಲ್ಲಬೇಕು ಎಂಬ ಹಠ ಬಿಜೆಪಿಯದ್ದಾಗಿದೆ. ಕಾಂಗ್ರೆಸ್ ನಾಯಕರಿಗೂ ಆ ಎರಡು ಕ್ಷೇತ್ರವನ್ನು ಗೆಲ್ಲುವ ಭರವಸೆ ಇದೆ. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಟಿಕೆಟ್ ಗೆ ಬೇಡಿಕೆ ಜಾಸ್ತಿಯಾಗಿದೆ. ಬಿಜೆಪಿ ಏನೋ ಅಭ್ಯರ್ಥಿಗಳನ್ನ ಅನೌನ್ಸ್ ಮಾಡಿ ಆಗಿದೆ. ಈಗ ಎಲ್ಲರ ಚಿತ್ರ ಕಾಂಗ್ರೆಸ್ ನತ್ತಿ ನೆಟ್ಟಿದೆ. ಆ ಕಡೆಯಿಂದ ಯಾರನ್ನ ಅಭ್ಯರ್ಥಿಯನ್ನಾಗಿ ನಿಲ್ಲಿಸಬಹುದು ಎಂಬ ಕುತೂಹಲವಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now