Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ : ಏನಿದು ಯತ್ನಾಳ್ ಮಾತಿನ ಅರ್ಥ..?

---Advertisement---

ವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗಂತೂ ಕಾಂಗ್ರೆಸ್ ಟಿಕೆಟ್ ಹಂಚಿಕೆಯೇ ದೊಡ್ಡ ಸವಾಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಅಂದ್ರೆ ಮಲ್ಲಿಕಾರ್ಜುನ ಅವರ ಮಗನಿಗೆ ಟಿಕೆಟ್ ನೀಡಬೇಕೆಂದು ಕುಟುಂಬಸ್ಥರ ಒತ್ತಾಯ. ಅತ್ತ ಶಾಮನೂರು ಶಿವಶಂಕರಪ್ಪ ಅವರು ಇದ್ದಿದ್ದರು ಅಲ್ಪಸಂಖ್ಯಾತರಿಗೇನೆ ನೀಡುತ್ತೇನೆ ಮುಂದಿನ ಚುನಾವಣೆಯ ಟಿಕೆಟ್ ಅಂತ ಹೇಳಿದ್ರು ಎಂದು ಅಲ್ಲಸಂಖ್ಯಾತರು ದುಂಬಾಲು ಬಿದ್ದಿದ್ದಾರೆ. ಹೀಗಾಗಿ ಹೈಕಮಾಂಡ್ ತೀರ್ಮಾನ ಏನಾಗಬಹುದು ಎಂಬುದು ಎಲ್ಲರ ಕುತೂಹಲವಿರುವಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸದೊಂದು ಬಾಂಬ್ ಹಾಕಿದ್ದಾರೆ.

ವಿಜಯಪುರದಲ್ಲಿ ಮಾತನ್ನಾಡಿದ ಅವರು, ಯಡಿಯೂರಪ್ಪ ಅವರ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನ ಬಲಿ ಕೊಡ್ತಾ ಇದೆ. ಯಡಿಯೂರಪ್ಪ ಅವರ ಕುಟುಂಬ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಈ ಹಿಂದೆ ಶಿವಮೊಗ್ಗದಲ್ಲಿ ರಾಘವೆಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಯಡಿಯೂರಪ್ಪ ಅವರು ಶಾಮನೂರು ಶಿವಶಂಕರಪ್ಪಗೆ ಮತ ಹಾಕುವಂತೆ ಹೇಳಿದ್ದರು.

ಒಂದೊಮ್ಮೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ, ಇತ್ತ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದರು, ಆಮೇಲೆ ಅದನ್ನು ವಾಪಾಸ್ ಪಡೆದು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ನೀಡುತ್ತಾರೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಬಿಜೆಪಿ ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ಎರೆಉ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿದೆ. ಈಗೇನಿದ್ದರೂ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬಹುದು ಎಂಬ ಕುತೂಹಲವಂತು ಇದ್ದೇ ಇದೆ. ಈಗ ಯತ್ನಾಳ್ ಅವರು ಸಿಡಿಸಿರುವ ಬಾಂಬ್ ನಿಜವಾಗುತ್ತಾ ಹೇಗೆ ಅನ್ನೋದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now