Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪತ್ನಿ-ಮಗಳು ಸೇರಿ ಐವರ ಮೇಲೆ ಆಸಿಡ್ ದಾಳಿ, ಆರೋಪಿ ಪರಾರಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ತನ್ನಿಂದ ದೂರವಿದ್ದ ಪತ್ನಿಯ ಮೇಲೆ ಕೋಪಗೊಂಡ ವ್ಯಕ್ತಿ ತನ್ನ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಪತ್ನಿಯನ್ನ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಗುರುವಾರ ನಡೆದಿದೆ.

 

ಮೊಹಮ್ಮದ್ ಸುಹೇಲ್ (44) ಎಂಬಾತನೇ ಆಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿಯಾಗಿದ್ದಾನೆ. ಈ ಘಟನೆಯಲ್ಲಿ, ಆತನ ಪತ್ನಿ ತಾಸಿನಾಬಾನು, ಮಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಇವರಿಬ್ಬರೂ ಕಳೆದ 8 ತಿಂಗಳುಗಳಿಂದ ದೂರವಾಗಿ ವಾಸವಿದ್ದರು ಎಂದು ತಿಳಿದು ಬಂದಿದೆ.

ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸುಹೇಲ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ತಾಸಿನಾ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರು ನಗರ ಸೇರಿದ್ದಳು. ಇದೀಗ ತಾಸಿನಾ ರಂಜಾನ್ ಹಬ್ಬಕ್ಕೆಂದು ತನ್ನ ಸಹೋದರಿ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ಬಂದು ಆಸಿಡ್ ದಾಳಿ ನಡೆಸಿದ್ದಾನೆ. ಬಳಿಕ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಮಾಳಪ್ಪನಹಟ್ಟಿಯ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಆಟೋ ಚಾಲಕನಾಗಿರುವ ಸುಹೇಲ್ ಭಾಷಾನಿಂದ ಆಸಿಡ್ ದಾಳಿ ನಡೆಸಿದ್ದಾನೆ. ಸದ್ಯ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿ ಬಂಧನಕ್ಕೆ ತಂಡ ರಚಿಸಿದ್ದೇವೆ. ಬಂಧನದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now