Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುಗಾದಿ ಹೊಸತೊಡಕು: ಮಾಂಸಕ್ಕೆ ಭಾರೀ ಬೇಡಿಕೆ, ಬೆಲೆ‌ ಹೀಗಿದೆ

---Advertisement---

 

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮದ ನಡುವೆ, ಮರುದಿನದ ಹೊಸತೊಡಕು ಸಡಗರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಾಂಸ ಹಾಗೂ ಮಟನ್‌ಗೆ ಭಾರೀ ಬೇಡಿಕೆ ಕಾಣಿಸಿಕೊಂಡಿದೆ. ಮುಂಜಾನೆ  ಮಾಂಸದಂಗಡಿಗಳ ಮುಂದೆ ಜನರು ಕ್ಯೂನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕುಟುಂಬದವರು, ಬಂಧು-ಮಿತ್ರರೊಂದಿಗೆ ಸೇರಿ ಮಾಂಸದೂಟ ಸವಿಯುವ ಪರಂಪರೆಯ ಹಿನ್ನೆಲೆ, ಮಟನ್ ಹಾಗೂ ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ ಇದೆ.

ಹೆಚ್ಚಿದ ಬೇಡಿಕೆಯಿಂದಾಗಿ ಮಟನ್ ಬೆಲೆ ಕೂಡ ಏರಿಕೆಯಾಗಿದೆ. ಸಾಮಾನ್ಯವಾಗಿ ₹600-650 ಇದ್ದ ಮಟನ್ ದರ ಇಂದು ₹800 – 900ರವರೆಗೆ ಏರಿಕೆಯಾಗಿದೆ. ಕೆಲವೆಡೆ ಇನ್ನಷ್ಟು ದರ ಹೆಚ್ಚಳ ಕಂಡುಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ‘ಗುಡ್ಡೆ ಮಾಂಸ’ಕ್ಕೆ ವಿಶೇಷ ಬೇಡಿಕೆ ಇದೆ. ಬೆಂಗಳೂರು, ಮಂಡ್ಯ  ಗ್ರಾಮಗಳಲ್ಲಿ ಮುಂಜಾನೆಲೇ ಕುರಿ-ಮೇಕೆ ಕಟ್ ಮಾಡಲಾಗಿದ್ದು, ಜನರು ದೊಡ್ಡ ಸಂಖ್ಯೆಯಲ್ಲಿ ಖರೀದಿಗೆ ಆಗಮಿಸಿದ್ದಾರೆ.

ಇನ್ನೊಂದೆಡೆ, ಬೆಂಗಳೂರಿನಲ್ಲಿಯೂ ಮಟನ್ ಮತ್ತು ಚಿಕನ್ ಖರೀದಿಗೆ ಜನರು ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ದೇವನಹಳ್ಳಿ, ಬ್ಯಾಟರಾಯನಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 4 ಗಂಟೆಯಿಂದಲೇ ಅಂಗಡಿಗಳು ತೆರೆದು ವ್ಯಾಪಾರ ಜೋರಾಗಿದೆ.

ಈ ಬಾರಿ ಹೊಸತೊಡಕು ಹಿನ್ನೆಲೆಯಲ್ಲಿ ನಾಟಿ ಕೋಳಿ ಹಾಗೂ ಮೊಟ್ಟೆಗಳಿಗೆ ವಿಶೇಷ ಬೇಡಿಕೆ ಕಂಡುಬಂದಿದೆ. ಆರೋಗ್ಯದ ದೃಷ್ಟಿಯಿಂದ ನಾಟಿ ಹಾಗೂ ಜವಾರಿ ಆಹಾರಕ್ಕೆ ಜನರು ಹೆಚ್ಚು ಆದ್ಯತೆ ನೀಡುತ್ತಿರುವುದು ಗಮನಾರ್ಹ.ಯುಗಾದಿ ಹಬ್ಬದ ಹೊಸತೊಡಕು ಹಿನ್ನೆಲೆಯಲ್ಲಿ  ರಾಜ್ಯದಾದ್ಯಂತ ಮಾಂಸ ಮಾರುಕಟ್ಟೆಯಲ್ಲಿ ಚಟುವಟಿಕೆ ಗರಿಗೆದರಿದ್ದು, ಬೇಡಿಕೆಯೊಂದಿಗೆ ಬೆಲೆ ಏರಿಕೆಯೂ ಕಂಡುಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now