Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾಯಾಧೀಶರು

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 20 : ನಗರದ ಮಾಳಪ್ಪನಹಟ್ಟಿಯ‌ ಮನೆಯೊಂದರಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ, ಸಂತ್ರಸ್ಥರ ಆರೋಗ್ಯ ವಿಚಾರಿಸಿದರು.

 

ಮಾರ್ಚ್ 19ರಂದು ಗುರುವಾರ ಸಂಜೆ ಸುಮಾರು 5.30ಕ್ಕೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಅವರು ಉಪಸ್ಥಿತರಿದ್ದು, ಸಂತ್ರಸ್ತರ ಆರೋಗ್ಯದ ಸ್ಥಿತಿಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now