Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಂಜಾನ್ ಹಬ್ಬದ ಸಂಭ್ರಮ : ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ ಹೇಳಿದ್ದೇನು..?

---Advertisement---

ಬೆಂಗಳೂರು: ಇಂದು ರಂಜಾನ್ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಹಬ್ಬವನ್ನ ಬಹಳ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಂಗಳೂರಿನ ನಗರದಲ್ಲಿರುವ ಪ್ರಸಿದ್ಧಿ ಖಾದ್ರಿಯಾ ಮಸೀದಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ಖಾದ್ರಿಯಾ ಮಸೀದಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಪ್ಪು ಬಣ್ಣದ ಟೋಪಿ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಮಸೀದಿಯ ಮುಂಭಾಗದಲ್ಲಿ ನೆರೆದಿದ್ದ ಸಾವಿರಾರು ಮುಸ್ಲಿಂ ಬಾಂಧವರೊಂದಿಗೆ ಕೈ ಜೋಡಿಸಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಮಸೀದಿಯಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಏಕಕಾಲಕ್ಕೆ ಸಾಮೂಹಿಕ ಪ್ರಾರ್ಥನೆಯನ್ನ ಮಾಡಿದರು.

ಬಳಿಕ ಮಾತನ್ನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈದ್ ಉಲ್ ಫಿತರ್ ಹಿನ್ನೆಲೆಯಲ್ಲಿ ಸಮಸ್ತ ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದರು. ಪ್ರವಾದಿ ಮೊಹಮ್ಮದರ ಜೀವನವೂ ನಮಗೆ ಶಾಂತು, ಸಹೋದರತ್ವ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ. ರಾಜ್ಯದಲ್ಲಿ ಸೌಹಾರ್ದ ನೆಲೆಸಲಿ, ಎಲ್ಲರೂ ಅಣ್ಣ ತಮ್ಮಂದಿರಂತೆ ಬಾಳೋಣಾ ಎಂದು ಕರೆ ನೀಡಿದರು. ಇದೇ ವೇಳೆ ಅವರು ಈದ್ ಮಿಲಾದ್ ಹಿನ್ನೆಲಯಲ್ಲೂ ಶುಭಾಶಯಗಳನ್ನ ತಿಳಿಸಿದ್ರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...